ಭಾರತ ಕೃಷಿ ಪ್ರಧಾನ ರಾಷ್ಟ್ರ. ರೈತರಿಗೆ ನೆರವಾಗುವ ಸಲುವಾಗಿ ಸ್ಥಾಪನೆಯಾದ ಭಾರತೀಯ ರೈತ ರಸಗೊಬ್ಬರ ಸಹಕಾರಿ ನಿಯಮಿತ (IFFCO) ಸಂಸ್ಥೆ, ಅಗ್ರಿಕಲ್ಚರ್ ಗ್ರಾಜ್ಯುವೇಟ್ ಟ್ರೇನಿ ಹುದ್ದೆಗಳ ನೇಮಕಾತಿಗೆ ಆಧಿಸೂಚನೆ ಹೊರಡಿಸಿದೆ. ಬಿಎಸ್‌ಸಿ ಅಗ್ರಿಕಲ್ಚರ್ ಪಾಸಾದ ಅಭ್ಯರ್ಥಿಗಳು ಅಕ್ಟೋಬರ್ 14 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಇರಬೇಕಾದ ಇತರೆ ಅರ್ಹತೆಗಳೇನು ಎಂದು ತಿಳಿಯೋಣ.
ಹುದ್ದೆಯ ಹೆಸರು
ಅಗ್ರಿಕಲ್ಚರ್ ಗ್ರಾಜ್ಯುವೇಟ್ ಟ್ರೇನಿ (AGT)
ವಿದ್ಯಾರ್ಹತೆ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ (ಅಗ್ರಿ) ಪದವಿ ಹೊಂದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ 60% ಅಂಕ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 55% ಅಂಕ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಸ್ಟೈಫಂಡ್ : ತಿಂಗಳಿಗೆ ₹33,300
ವಯೋಮಿತಿ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 30 ವರ್ಷಗಳಿಗಿಂತ ಹೆಚ್ಚಿರಬಾರದು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ IFFCO ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಬಹುದು.
ಆಯ್ಕೆ ಹೇಗೆ?
ಆನ್‌ಲೈನ್ ಲಿಖಿತ ಪರೀಕ್ಷೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.