ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ ನಬಾರ್ಡ್ ನೆಟವರ್ಕ್ ಸೆಕ್ಯುರಿಟಿ ಅನಲಿಸ್ಟ್, ಅನಲಿಸ್ಟ್, ಒಡಿಟರ್, ಸೈಬರ್ ಸೆಕ್ಯುರಿಟಿ ಮುಂತಾದ ಹುದ್ದೆಗಳನ್ನು ನೇಮಕಮಾಡಿಕೊಳ್ಳಲಿದೆ. ಈ ನೇಮಕಾತಿಯಲ್ಲಿ ನಬಾರ್ಡ್ ಒಟ್ಟು 16 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಅಕ್ಟೋಬರ್ 26 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು ಈ ರೀತಿಯಾಗಿವೆ..
ಶೈಕ್ಷಣಿಕ ಅರ್ಹತೆ
ನಬಾರ್ಡ್ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಇ/ಬಿಟೆಕ್/ಎಮ್ಸಿಎ/ಪಿಜಿ ಪೂರೈಸಿರಬೇಕು. ಶೇಕಡಾ 60 ಅಂಕ ಪಡೆದಿರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
ವಯೋಮಿತಿ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಹುದ್ದೆಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಕನಿಷ್ಠ ವಯಸ್ಸು ಕ್ರಮವಾಗಿ 24, 26, 30 ವರ್ಷಗಳು. ಅದೇ ರೀತಿ ಗರಿಷ್ಠ ವಯೋಮಿತಿಯು 32, 35 ಮತ್ತು 45 ವರ್ಷಗಳು ಎಂದು ನಬಾರ್ಡ್ ನಿಗದಿಪಡಿಸಿದೆ.
ವೇತನ
ನಬಾರ್ಡ್ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ₹12 ಲಕ್ಷದಿಂದ ₹40 ಲಕ್ಷದವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹700 + ₹150 ಮತ್ತು ಎಸ್ಸಿ, ಎಸ್ಟಿ ಹಾಗೂ ದಿವ್ಯಾಂಗ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಹೇಗೆ?
ನಬಾರ್ಡ್ನ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.