Kannada News Next

job

ಯುಪಿಎಸ್‌ಸಿ ಎಂಜಿನಿಯರಿಂಗ್‌ ಸೇವೆಗಳ ಪರೀಕ್ಷೆ 2027 ಅಧಿಸೂಚನೆ ಪ್ರಕಟ ! 480 ಖಾಲಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ !

UPSC ಎಂಜಿನಿಯರಿಂಗ್‌ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಖಾಲಿ ಇರುವ 480 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

By Archana V Bhat
Photo: AI

UPSC ಎಂಜಿನಿಯರಿಂಗ್‌ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಖಾಲಿ ಇರುವ 480 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ದೇಶದ ಅತ್ಯುನ್ನತ ನಾಗರಿಕ ಸೇವೆ ಯುಪಿಎಸ್‌ಸಿ ಎಂಜಿನಿಯರಿಂಗ್‌ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಮೂಲಕ 4 ಮುಖ್ಯ ವಿಭಾಗಗಳಲ್ಲಿ (ಸಿವಿಲ್‌, ಮೆಕ್ಯಾನಿಕಲ್‌, ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಆಂಡ್‌ ಕಮ್ಯುನಿಕೇಷನ್‌) ಖಾಲಿ ಇರುವ 480 ಖಾಲಿ ಹುದ್ದೆಗಳ ಭರ್ತಿಗೆ ಪರೀಕ್ಷೆಗೆ ನಡೆಸಲಿದೆ. ಇದು ವಿವಿಧ ಸರ್ಕಾರಿ ಇಲಾಖೆ ಮತ್ತು ಸಚಿವಾಲಯಗಳಲ್ಲಿನ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ನಡೆಸುವ ಪರೀಕ್ಷೆಯಾಗಿದೆ. ಇದಕ್ಕೆ ಅರ್ಜಿ ಸಲ್ಲಿಕೆಯು ಈಗಾಗಲೇ ಪ್ರಾರಂಭವಾಗಿದ್ದು ಅಕ್ಟೋಬರ್‌ 6 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ

ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ, ಬಿಟೆಕ್‌ ಪೂರ್ಣಗೊಳಿಸಬೇಕು/ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ (ಭಾರತ) ಇನ್ಸ್ಟಿಟ್ಯೂಟ್ ಪರೀಕ್ಷೆಗಳಲ್ಲಿ ವಿಭಾಗ ಎ ಮತ್ತು ಬಿ/ ಏರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ ಅಸೋಸಿಯೇಟ್ ಸದಸ್ಯತ್ವ ಪರೀಕ್ಷೆಯಲ್ಲಿ ಭಾಗ 2, 3/ವಿಭಾಗ ಎ ಮತ್ತು ಬಿ / ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್ ಎಂಜಿನಿಯರ್ಸ್ (ಭಾರತ) ದ ಗ್ರಾಜುಯೇಟ್ ಸದಸ್ಯತ್ವ ಪರೀಕ್ಷೆ/ ಎಂ.ಎಸ್ಸಿ. (ವೈರ್‌ಲೆಸ್ ಕಮ್ಯುನಿಕೇಷನ್ ಎಲೆಕ್ಟ್ರಾನಿಕ್ಸ್, ರೇಡಿಯೋ ಫಿಸಿಕ್ಸ್, ರೇಡಿಯೋ ಎಂಜಿನಿಯರಿಂಗ್) ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಜನವರಿ 1, 2027 ಕ್ಕೆ ಸರಿಯಾಗಿ 21 ರಿಂದ 30 ವರ್ಷಗಳ ನಡುವಿನ ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಅರ್ಜಿ ಶುಲ್ಕ

ಈ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಆದರೆ ಎಸ್‌ಸಿ, ಎಸ್‌ಟಿ, ಮಹಿಳೆಯರು ಮತ್ತು ದಿವ್ಯಾಂಗರಿಗೆ ಯಾವುದೇ ಶುಲ್ಕವಿರುವುದಿಲ್ಲ.

ಆಯ್ಕೆ ಹೇಗೆ?

ಈ ನೇಮಕಾತಿಯಲ್ಲಿ ಮೂರು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಪ್ರಿಲಿಮ್ಸ್‌, ಮೇನ್ಸ್‌ ಮತ್ತು ವ್ಯಕ್ತಿತ್ವ ಪರೀಕ್ಷೆ.

ಅರ್ಜಿ ಸಲ್ಲಿಕೆ ಹೇಗೆ?

ಇದಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ವಿವರಗಳಿಗಾಗಿ upsc.gov.in ವೆಬ್‌ಸೈಟ್‌ಗೆ ಭೇಟಿ ನೀಡಿ.