ರೈಲ್ವೆಯಲ್ಲಿ 560 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ನೇಮಕಾತಿ ! ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ !
ಪ್ಯಾರಾಮೆಡಿಕಲ್ ಕೋರ್ಸ್‌ಗಳನ್ನು ಪೂರ್ಣಗೊಳಿಸಿ ರೈಲ್ವೆಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಗುಡ್ ನ್ಯೂಸ್. ಆರ್‌ಆರ್‌ಬಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ಖಾಲಿ ಇರುವ ಅರೆವೈದ್ಯಕೀಯ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಆರ್‌ಆರ್‌ಬಿ 560 ಪ್ಯಾರಾಮೆಡಿಕಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಪ್ಯಾರಾಮೆಡಿಕಲ್ ಕೋರ್ಸ್ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 15 ರಿಂದ ಪ್ರಾರಂಭವಾಗುತ್ತದೆ ಹಾಗೂ ಅಂತಿಮ ದಿನಾಂಕ ಅಕ್ಟೋಬರ್ 14 ಆಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಂತಿಮ ಗಡುವಿನ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆಗಳು
ಡಯಾಲಿಸಿಸ್ ತಂತ್ರಜ್ಞ - ಹಂತ 6
ಇಸಿಜಿ ತಂತ್ರಜ್ಞ - ಹಂತ 4
ಲ್ಯಾಬ್ ಅಸಿಸ್ಟೆಂಟ್ ಗ್ರೇಡ್-II - ಹಂತ 3
ನರ್ಸಿಂಗ್ ಸೂಪರಿಂಟೆಂಡೆಂಟ್ - ಹಂತ 7
ಫಾರ್ಮಸಿಸ್ಟ್ (ಪ್ರವೇಶ ದರ್ಜೆ) - ಹಂತ 5
ರೇಡಿಯೋಗ್ರಾಫರ್ ಎಕ್ಸ್-ರೇ ತಂತ್ರಜ್ಞ - ಹಂತ 5
ಆರೋಗ್ಯ ಮತ್ತು ಮಲೇರಿಯಾ ಇನ್ಸ್‌ಪೆಕ್ಟರ್ ಗ್ರೇಡ್-II - ಹಂತ
6 ಆಪ್ಟೋಮೆಟ್ರಿಸ್ಟ್ - ಹಂತ 4
ಆಡಿಯಾಲಜಿಸ್ಟ್ ಮತ್ತು ಸ್ಪೀಚ್ ಥೆರಪಿಸ್ಟ್ - ಹಂತ 6
ಈ ಮೇಲಿನ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್‌ಆರ್‌ಬಿ ನೇಮಕಾತಿ ಮಾಡಿಕೊಳ್ಳಲಿದೆ.
ವಿದ್ಯಾರ್ಹತೆ
ಇಲ್ಲಿ ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಡಿಪ್ಲೊಮಾ, ಬಿಎಸ್ಸಿ, ಪಿಜಿ ಡಿಪ್ಲೊಮಾ ಹಾಗೂ 12 ತರಗತಿ ಉತ್ತೀರ್ಣರಾಗಿರಬೇಕು ಎಂದು ಆರ್‌ಬಿಐ ಸೂಚಿಸಿದೆ. ನೀವು ಯಾವ ವಿದ್ಯಾರ್ಹತೆಯನ್ನು ಹೊಂದಿದ್ದೀರಿ ಎಂಬುದರ ಮೇಲೆ ಅರ್ಜಿ ಸಲ್ಲಿಸಿ.
ವಯೋಮಿತಿ
ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯು 18 ರಿಂದ 40 ವರ್ಷಗಳನ್ನು ನಡುವೆ ಇರಬೇಕೆಂದು ಆರ್‌ಆರ್‌ಬಿ ತಿಳಿಸಿದೆ.
ಅರ್ಜಿ ಶುಲ್ಕ
ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಮೀಸಲು ವರ್ಗದವರಲ್ಲದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹500. ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕರು, ದಿವ್ಯಾಂಗರು, ಮಹಿಳೆಯರು, ಟ್ರಾನ್ಸ್‌ಜೆಂಡರ್, ಅಲ್ಪಸಂಖ್ಯಾತರು, ಇಬಿಸಿಗಳಿಗೆ ₹250 ಆಗಿದೆ.
ವೇತನ
ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21,700 ರಿಂದ ₹44,900 ರವರೆಗೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿ ಸಲ್ಲಿಕೆಯು ಅಕ್ಟೋಬರ್ 14 ರಂದು ಕೊನೆಗೊಳ್ಳುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ indianrailways.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Topics
ಸಂಬಂಧಿತ ಸುದ್ದಿಗಳು
job
UPSC ಜಿಯೋ ಸೈಂಟಿಸ್ಟ್ ನೇಮಕಾತಿ : ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 22 ರೊಳಗೆ ಅರ್ಜಿ ಸಲ್ಲಿಸಿ
job
ಪಿಯುಸಿ ಆದವರಿಗೆ ಗುಡ್ನ್ಯೂಸ್ : SSC ಯಿಂದ 2536 ಎಲ್ಡಿಸಿ, ಡಿಒಪಿ ಹುದ್ದೆಗಳಿಗೆ ಅರ್ಜಿ ಆಹ್ವಾನ !
job
ಶೀಘ್ರದಲ್ಲೇ ಕೊನೆಗೊಳ್ಳಲಿದೆ RRB JE ಅರ್ಜಿ ಸಲ್ಲಿಕೆ ! ಜೂನಿಯರ್ ಎಂಜಿನಿಯರ್ ಆಗುವ ಅವಕಾಶ ತಪ್ಪಿಸಿಕೊಳ್ಳಬೇಡಿ!
job

