ಶೀಘ್ರದಲ್ಲೇ ಕೊನೆಗೊಳ್ಳಲಿದೆ RRB JE ಅರ್ಜಿ ಸಲ್ಲಿಕೆ ! ಜೂನಿಯರ್ ಎಂಜಿನಿಯರ್ ಆಗುವ ಅವಕಾಶ ತಪ್ಪಿಸಿಕೊಳ್ಳಬೇಡಿ!
RRB ಜೂನಿಯರ್ ಎಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀಡಿರುವ ಅಂತಿಮ ದಿನಾಂಕ ಸಮೀಪಿಸುತ್ತಿದೆ. ಆಸಕ್ತರು ಸೆಪ್ಟೆಂಬರ್ 13 ರರೊಳಗೆ ಫಾರ್ಮ್ ಸಲ್ಲಿಸಿ.
ಸರ್ಕಾರಿ ಎಂಜಿನಿಯರ್ ಆಗಬೇಕು ಎಂಬ ಕನಸನ್ನು ಇಟ್ಟುಕೊಂಡ ಬಹಳಷ್ಟು ಯುವಜನರನ್ನು ಕಾಣಬಹುದು. ಅದಕ್ಕಾಗಿ ವರ್ಷಗಟ್ಟಲೆ ತಯಾರಿ ನಡೆಸುತ್ತಿರುವವರು ಇದ್ದಾರೆ. ಅಂತಹವರಿಗೆ ಇದೊಂದು ಸುವರ್ಣಾವಕಾಶ. ರೈಲ್ವೆ ರಿಕ್ರೂಟ್‌ಮೆಂಟ್ ಬೋರ್ಡ್ (RRB) ಖಾಲಿ ಇರುವ 4029 ಜೂನಿಯರ್ ಎಂಜಿನಿಯರ್ (JE) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಈಗಾಗಲೇ ಹೊರಡಿಸಿದೆ. ನಿಮ್ಮಲ್ಲಿ ಬಹಳಷ್ಟು ಜನರು ಇದಕ್ಕೆ ಅರ್ಜಿಯನ್ನು ಸಹ ಹಾಕಿರಬಹುದು. ಆದರೆ ಕಾರಣಾಂತರಗಳಿಂದ ಅರ್ಜಿ ಸಲ್ಲಿಸಲು ಆಗದವರು ಸೆಪ್ಟೆಂಬರ್ 13 ರ ಒಳಗೆ ಅರ್ಜಿ ಸಲ್ಲಿಸಿ, ತಮ್ಮ ಕನಸು ನನಸು ಮಾಡಿಕೊಳ್ಳಬಹುದಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಇಲ್ಲಿದೆ ಓದಿ.
ಶೈಕ್ಷಣಿಕ ಅರ್ಹತೆ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ಕ್ಷೇತ್ರದಲ್ಲಿ ಎಂಜಿನಿಯರಿಂಗ್ ಪದವಿ ಅಥವಾ 3 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ ಗರಿಷ್ಠ ವಯಸ್ಸು 33 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ₹500 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆದರೆ ಎಸ್‌ಸಿ, ಎಸ್‌ಟಿ, ಮತ್ತು ಪಿಎಚ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ₹250 ಅರ್ಜಿ ಶುಲ್ಕ ಸಲ್ಲಿಸಬೇಕು. ಸಿಬಿಟಿ 1 ಪರೀಕ್ಷೆ ಪಾಸಾದ ಬಳಿಕ ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹400 ಮರುಪಾವತಿಸಲಾಗುತ್ತದೆ ಮತ್ತು ಎಸಿ/ಎಸ್‌ಟಿ/ಪಿಎಚ್/ಮಹಿಳಾ ಅಭ್ಯರ್ಥಿಗಳಿಗೆ ₹400 ಮರುಪಾವತಿಸಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ರೈಲ್ವೆ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಕಂಪ್ಯೂಟರ್ ಆಧಾರಿತ ಆಪ್ಟಿಟ್ಯೂಡ್ ಟೆಸ್ಟ್ (CBAT), ದಾಖಲೆ ಪರಿಶೀಲನೆ (DV) ಮತ್ತು ವೈದ್ಯಕೀಯ ಪರೀಕ್ಷೆ (ME) ನಡೆಸಲಾಗುತ್ತದೆ. ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ರೈಲ್ವೆ ಜೂನಿಯರ್ ಎಂಜಿನಿಯರ್ ಆಗಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
RRB JE ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ rrbapply.gov.in ಪೋರ್ಟಲ್‌ಗೆ ಭೇಟಿ ನೀಡಿ.
ವೆಬ್‌ಸೈಟ್‌ನ ಮುಖಪುಟದಲ್ಲಿರುವ ‘ಕ್ರಿಯೇಟ್ ಆನ್ ಅಕೌಂಟ್’ ಮೇಲೆ ಕ್ಲಿಕ್ ಮಾಡಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿ.
ನಂತರ ಲಾಗಿನ್ ಆಗಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಬಳಿಕ ವರ್ಗವಾರು ಅರ್ಜಿ ಶುಲ್ಕ ಪಾವತಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅದರ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
Topics
ಸಂಬಂಧಿತ ಸುದ್ದಿಗಳು
job
NIC ನೇಮಕಾತಿ 2026 : 376 ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
job
BOI SO ನೇಮಕಾತಿ 2026 : ಈ ದಿನದಿಂದ 200 ಕ್ಕೂ ಹೆಚ್ಚು ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ!
job
KPSC 319 KAS ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೇ ದಿನ ! ಗ್ಯಾಜೆಟೆಡ್ ಆಫೀಸರ್ ಆಗುವ ಅವಕಾಶ ತಪ್ಪಿಸಿಕೊಳ್ಳಬೇಡಿ !
job

