ಪದವೀಧರರೇ ಗಮನಿಸಿ ! ರೈಲ್ವೆ ಸ್ಟೇಷನ್ ಕಂಟ್ರೋಲರ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ..!
ರೈಲ್ವೆ ಸೆಕ್ಷನ್ ಕಂಟ್ರೋಲರ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆ ದಿನ. ಆಸಕ್ತ ಅರ್ಹ ಪದವೀಧರರು ಆನ್‌ಲೈನ್‌ನಲ್ಲಿ ಇಂದೇ ಅರ್ಜಿ ಸಲ್ಲಿಸಿ.
By Archa V Bhat
1 min read
ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕೆಂಬ ಕನಸು ಹೊತ್ತ ಯುವ ಪದವೀಧರರಿಗೆ ತಮ್ಮ ಕನಸು ನನಸು ಮಾಡಿಕೊಳ್ಳಲು ಕೊನೆಯ ಅವಕಾಶವಿದೆ. ಅದೇನೆಂದರೆ ಆರ್‌ಆರ್‌ಬಿ ಸೆಕ್ಷನ್ ಕಂಟ್ರೋಲರ್ ಹುದ್ದೆಗೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನವಾಗಿದೆ. ಆಸಕ್ತ ಅರ್ಹ ಪದವೀಧರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್ rrbapply.gov.in ಗೆ ಭೇಟಿ ನೀಡುವ ಮೂಲಕ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಎಂದು ನೋಡೋಣ.
ವಯೋಮಿತಿ
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 33 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ. ಒಬಿಸಿಗಳಿಗೆ 3 ವರ್ಷಗಳು, ಎಸ್‌ಸಿ/ಎಸ್‌ಟಿ ವರ್ಗದವರಿಗೆ 5 ವರ್ಷಗಳು ಹಾಗೂ ಇತರ ಮೀಸಲು ವರ್ಗಗಳಿಗೆ 5 ವರ್ಷಗಳ ಸಡಿಲಿಕೆಯಿರುತ್ತದೆ.
ಶೈಕ್ಷಣಿಕ ಅರ್ಹತೆ
ಸೆಕ್ಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಆರ್‌ಆರ್‌ಬಿ ಸೆಕ್ಷನ್ ಕಂಟ್ರೋಲರ್ ಹುದ್ದೆ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಅರ್ಜಿಯೊಂದಿಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದೆ. ಮೀಸಲಾತಿ ಇಲ್ಲದ, ಒಬಿಸಿ ಮತ್ತು EWS ವರ್ಗಗಳಿಗೆ 500 ರೂ. ಮತ್ತು SC, ST, PH ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಿಬಿಟಿ ಪರೀಕ್ಷೆಯಲ್ಲಿ ಪಾಸಾದ ಮೀಸಲಾತಿ ಇಲ್ಲದ, OBC ಮತ್ತು EWS ಅಭ್ಯರ್ಥಿಗಳಿಗೆ ₹400 ಮರುಪಾವತಿಸಲಾಗುತ್ತದೆ ಮತ್ತು ಎಲ್ಲಾ ವರ್ಗಗಳ SC, ST, PH ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪೂರ್ಣ ಶುಲ್ಕವನ್ನು ಮರುಪಾವತಿಸಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಆರ್‌ಆರ್‌ಬಿ ಸೆಕ್ಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್ rrbapply.gov.in ಗೆ ಭೇಟಿ ನೀಡಿ.
ವೆಬ್‌ಸೈಟ್‌ನ ಮುಖಪುಟದಲ್ಲಿರುವ ‘Create An Account’ ಮೇಲೆ ಕ್ಲಿಕ್ಕಿಸಿ ರೆಜಿಸ್ಟ್ರೇಷನ್ ಮಾಡಿಕೊಳ್ಳಿ.
ಬಳಿಕ ಲಾಗಿನ್ ಆಗಿ ಅಲ್ಲಿ ನಿಮ್ಮ ವಿವರಗಳನ್ನು ನಮೂದಿಸಿ ಫಾರ್ಮ್ ಭರ್ತಿ ಮಾಡಿ.
ನಂತರ ಅರ್ಜಿ ಶುಲ್ಕ ಪಾವತಿಸಿ. ಇನ್ನೊಮ್ಮೆ ಅರ್ಜಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಅಂತಿಮವಾಗಿ ಅರ್ಜಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
Topics
ಸಂಬಂಧಿತ ಸುದ್ದಿಗಳು
job
ಎನ್ಎಚ್ಎಐಯಲ್ಲಿ ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾಸಿಕ ವೇತನ 60,000
job
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ - ಇಂದೇ ಅಪ್ಲೈ ಮಾಡಿ
job
ಪದವೀಧರರಿಗೆ ಸುವರ್ಣಾವಕಾಶ : SBI 1538 ಕ್ಲರ್ಕ್ ಹುದ್ದೆಗೆ ಅರ್ಜಿ
job

