ಎಸ್‌ಬಿಐ ನಲ್ಲಿ 9124 ಕ್ಲರ್ಕ್‌ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ : ವೇತನ 60,000 ಕ್ಕೂ ಅಧಿಕ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಜೂನಿಯರ್‌ ಅಸೋಸಿಯೇಟ್‌ ಕ್ಲರ್ಕ್‌ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

By Archana V Bhat

1 min read

WhatsAppPost
ಎಸ್‌ಬಿಐ ನಲ್ಲಿ 9124 ಕ್ಲರ್ಕ್‌ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ : ವೇತನ 60,000 ಕ್ಕೂ ಅಧಿಕ
Photo: AI

ದೇಶದ ಪ್ರತಿಷ್ಠಿತ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಜೂನಿಯರ್‌ ಅಸೋಸಿಯೇಟ್‌ ಕ್ಲರ್ಕ್‌ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಎಸ್‌ಬಿಐ ಒಟ್ಟು 9124 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನವಾಗಿದೆ. ಎಸ್‌ಬಿಐ ಕ್ಲರ್ಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಹೀಗಿವೆ:

ಎಸ್‌ಬಿಐ ಕ್ಲರ್ಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 20 ರಿಂದ 28 ವರ್ಷಗಳ ಒಳಗೆ ಇರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ವೇತನ : ಎಸ್‌ಬಿಐ ಕ್ಲರ್ಕ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 24,050 ರೂ. ದಿಂದ 64,480 ರೂ.ಗಳ ವರೆಗೆ ನೀಡಲಾಗುತ್ತದೆ.

ಅರ್ಜಿ ಶುಲ್ಕ

SC/ST/ದಿವ್ಯಾಂಗ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಸಂಪೂರ್ಣ ಉಚಿತ.

ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್‌ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಸಲ್ಲಿಸಬಹುದಾಗಿದೆ.

Topics

ಸಂಬಂಧಿತ ಸುದ್ದಿಗಳು