Kannada News Next

job

‍ಪಿಯುಸಿ ಆದವರಿಗೆ ಗುಡ್‌ನ್ಯೂಸ್‌ : SSC ಯಿಂದ 2536 ಎಲ್‌ಡಿಸಿ, ಡಿಒಪಿ ಹುದ್ದೆಗಳಿಗೆ ಅರ್ಜಿ ಆಹ್ವಾನ !

ಸ್ಟಾಫ್‌ ಸೆಲಕ್ಷನ್‌ ಕಮೀಷನ್‌ ಒಟ್ಟು 2,536 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.

By Archana V Bhat
SSC Recruitment

ಸ್ಟಾಫ್‌ ಸೆಲಕ್ಷನ್‌ ಕಮೀಷನ್‌ (SSC) ಲೋವರ್‌ ಡಿವಿಸನ್‌ ಕ್ಲರ್ಕ್‌ ಮತ್ತು ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳಿಗೆ CSHL ಅಡಿಯಲ್ಲಿ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಪಿಯುಸಿ ಅಥವಾ 10+2 ಉತ್ತೀರ್ಣರಾಗಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಟಾಫ್‌ ಸೆಲಕ್ಷನ್‌ ಕಮೀಷನ್‌ ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 2,536 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಸೆಪ್ಟೆಂಬರ್‌ 7 ರಿಂದ ಪ್ರಾರಂಭವಾಗಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಅಕ್ಟೋಬರ್‌ 7 ರವರೆಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಇತರೆ ಅರ್ಹತೆಗಳೇನು ಎಂದು ನೋಡೋಣ.

ವಯೋಮಿತಿ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 12 ನೇ ತರಗತಿ ಅಥವಾ ಪಿಯುಸಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಪಾವತಿಸಬೇಕು. ಮೀಸಲು ವರ್ಗಕ್ಕೆ ಸೇರದ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. ಆದರೆ ಮೀಸಲು ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಎಸ್‌ಎಸ್‌ಸಿ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.

ಪರೀಕ್ಷೆ ಹೇಗೆ?

ಎಸ್‌ಎಸ್‌ಸಿ ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳು ಆಯ್ಕೆ ಮಾಡುತ್ತದೆ. ಟೈರ್‌ – 1 ರಲ್ಲಿ ಅಭ್ಯರ್ಥಿಗಳು ಇಂಗ್ಲೀಷ್‌, ಜನರಲ್‌ ಇಂಟಿಲಿಜಂಟ್‌, ಕ್ವಾಟಿಟೇಟಿವ್‌ ಆಪ್ಟಿಟ್ಯೂಡ್‌ ಮತ್ತು ಸಾಮನ್ಯ ಜ್ಞಾನದ ಮೇಲೆ 200 ಅಂಕಗಳಿಗೆ ಪರೀಕ್ಷೆಯನ್ನು ಬರೆಯಬೇಕು. ಇದರಲ್ಲಿ ಎಲ್ಲ ಪ್ರಶ್ನೆಗಳು ಮಲ್ಟಿಪಲ್‌ ಚಾಯ್ಸ್‌ ದ್ದಾಗಿರುತ್ತದೆ. ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಟೈರ್–2 ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ.

ಪರೀಕ್ಷೆ ಎಲ್ಲಿ?

ಎಸ್‌ಎಸ್‌ಸಿ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರವನ್ನೂ ಅರ್ಜಿಯಲ್ಲಿ ಭರ್ತಿ ಮಾಡಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಕರ್ನಾಟಕದಲ್ಲಿ ಎಸ್‌ಎಸ್‌ಸಿಯು ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷೆಯನ್ನು ನಡೆಸಲಿದೆ. ಅಭ್ಯರ್ಥಿಗಳು ತಮಗೆ ಸಮೀಪವಾಗುವ ಸೆಂಟರ್‌ ಅನ್ನು ಅರ್ಜಿ ಭರ್ತಿ ಮಾಡುವಾಗ ಕಡ್ಡಾಯವಾಗಿ ನಮೂದಿಸಬೇಕು.

ಅರ್ಜಿ ಸಲ್ಲಿಕೆ ಹೇಗೆ?

ಎಸ್‌ಎಸ್‌ಸಿ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.