Kannada News Next

job

ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ನಲ್ಲಿ ಆಫೀಸರ್‌ ಆಗುವ ಸುವರ್ಣಾವಕಾಶ ! ಪದವೀಧರರು ಸೆಪ್ಟೆಂಬರ್‌ 28 ರೊಳಗೆ ಅರ್ಜಿ ಸಲ್ಲಿಸಿ !

ಸಾರ್ವಜನಿಕ ವಲಯದ ವಿಮಾ ಕಂಪನಿಯಾದ ಯುನೈಟೆಡ್‌ ಇಂಡಿಯಾ ಇನ್ಶುರೆನ್ಸ್‌ ಕಂಪನಿ ಲಿಮಿಟೆಡ್‌ ಖಾಲಿ ಇರುವ ಆಫೀಸರ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ.

By Archana V Bhat
UIIC AO Recruitment 2026

ಭಾರತ ಸರ್ಕಾರದ ಒಡೆತನದಲ್ಲಿರುವ ಮತ್ತು ಸಾರ್ವಜನಿಕ ವಲಯದ ವಿಮಾ ಕಂಪನಿಯಾದ ಯುನೈಟೆಡ್‌ ಇಂಡಿಯಾ ಇನ್ಶುರೆನ್ಸ್‌ ಕಂಪನಿ ಲಿಮಿಟೆಡ್‌ ಖಾಲಿ ಇರುವ ಆಫೀಸರ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಮೂಲಕ ಇನ್ಶುರೆನ್ಸ್‌ ಕಂಪನಿಯು ಜನರಲಿಸ್ಟ್‌ ಮತ್ತು ಸ್ಪೆಷಲಿಸ್ಟ್‌ ವಿಭಾಗಗಳಲ್ಲಿ ಒಟ್ಟು 225 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಇದು ಸ್ಕೇಲ್‌ –1 ಹುದ್ದೆಗಳಾಗಿದ್ದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್‌ 28 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆಗಳಿರಬೇಕು.

ವಿದ್ಯಾರ್ಹತೆ

ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಕಂಪ್ಯೂಟರ್‌ ಜ್ಞಾನದ ಜೊತೆಗೆ ಅನುಭವವೂ ಅಗತ್ಯ.

ವಯೋಮಿತಿ

ಯುನೈಟೆಡ್‌ ಇಂಡಿಯಾ ಇನ್ಶುರೆನ್ಸ್‌ ಕಂಪನಿ ಲಿಮಿಟೆಡ್‌ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ 21 ರಿಂದ 30 ವರ್ಷಗಳ ನಡುವೆ ಇರಬೇಕು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಅರ್ಜಿ ಶುಲ್ಕ

ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಇದಕ್ಕೆ ಅರ್ಜಿ ಶುಲ್ಕ ಪಾವತಿಸುವುದ ಕಡ್ಡಾಯವಾಗಿದೆ. ಎಸ್‌ಸಿ, ಎಸ್‌ಟಿ, ದಿವ್ಯಾಂಗ ಅಭ್ಯರ್ಥಿಗಳು ₹250+ಜಿಎಸ್‌ಟಿ ಪಾವತಿಸಬೇಕು. ಉಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ₹1000+ಜಿಎಸ್‌ಟಿ ಪಾವತಿಸಬೇಕು.

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹1,10,000 ವೇತನ ನೀಡಲಾಗುತ್ತದೆ.

ಆಯ್ಕೆ ಹೇಗೆ?

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಎರಡು ಹಂತದ ಪರೀಕ್ಷೆಯನ್ನು ಎದುರಿಸಬೇಕು. ಮೊದಲನೇಯದು ಲಿಖಿತ ಪರೀಕ್ಷೆ. ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ. ನಂತರ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್‌ 28ರೊಳಗೆ ಕಂಪನಿಯ ಅಧಿಕೃತ ವೆಬ್‌ಸೈಟ್‌ uiic.co.in ಗೆ ಭೇಟಿ ನೀಡಿ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ.