ಕೇಂದ್ರ ಲೋಕಸೇವಾ ಆಯೋಗದಲ್ಲಿ 421 ಅಧಿಕಾರಿಗಳ ಹುದ್ದೆಗೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗಾಗಿ ಕೇಂದ್ರ ಲೋಕಸೇವಾ ಆಯೋಗ 421 ಅಧಿಕಾರಿ / ಖಾತೆ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಜನವರಿ 31 2020ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಸಂಬಂಧಿಸಿದ ಮಾಹಿತಿ :
ಹುದ್ದೆಗಳ ಹೆಸರು :
ಜಾರಿ ಅಧಿಕಾರಿ /ಖಾತೆ ಅಧಿಕಾರಿ ಹುದ್ದೆ
ಸಂಸ್ಥೆ : ಕೇಂದ್ರ ಲೋಕಸೇವಾ ಆಯೋಗ
ವಿದ್ಯಾರ್ಹತೆ : ಯಾವುದೇ ಪದವಿ ( ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು)
ವಯೋಮಿತಿ : ಅಧಿಖಾರಿಗಳ ಹುದ್ದೆಗೆ ಗರಿಷ್ಟ 30 ವರ್ಷ ( ವಯೋಮಿತಿಯ ಸಡಿಲಿಕೆಯ ವಿವರಕ್ಕಾಗಿ ಅಧಿಸೂಚನೆಯನ್ನು ಓದಿ)
ಆಯ್ಕೆ ಪ್ರಕ್ರಿಯೆ : ಕೇಂದ್ರ ಲೋಕಸೇವಾ ಆಯೋಗ ನೇಮಕಾತಿಯ ಜಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ : ಕೇಂದ್ರ ಲೋಕಸೇವಾ ಆಯೋಗದ ನೇಮಕಾತಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 25/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪಂಗಡ / ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ https://www.upsc.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2020

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories

Leave a Reply

Your email address will not be published. Required fields are marked *