1112 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

0

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹೈದೆರಾಬಾದ್ ಕರ್ನಾಟಕ ಮತ್ತು ನಾನ್‌-ಹೈದ್ರಾಬಾದ್‌ ಕರ್ನಾಟಕ ವೃಂದಗಳ ಸಹಾಯಕ / ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯೋಗವು ಸಾರ್ವಜನಿಕ ಶಿಕ್ಷಣ ಇಲಾಖೆ, ಉದ್ಯೋಗ ಮತ್ತು ತರಬೇತಿ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯಗಳು ಸೇರಿದಂತೆ ಒಟ್ಟು 27 ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿ ಒಟ್ಟು 1112 (975+137 HK)  ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ..

ಹುದ್ದೆಗಳ ವಿವರ :
ಹೈದೆರಾಬಾದ್ ಕರ್ನಾಟಕ ಎಫ್‌ಡಿಎ ಹುದ್ದೆಗಳು ( HK ) : 137

ನಾನ್‌ – ಹೈದೆರಾಬಾದ್‌ ಕರ್ನಾಟಕ ಹುದ್ದೆಗಳು (NON – HK ) : 975

ಒಟ್ಟು ಹುದ್ದೆಗಳ ಸಂಖ್ಯೆ : 1112

ವಿದ್ಯಾರ್ಹತೆ :
ಸಹಾಯಕ/ ಪ್ರಥಮ ದರ್ಜೆ ಸಹಾಯಕ ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಆಗಿರಬೇಕು. ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯೋಮಿತಿ :
ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.

ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

ವೇತನ ಶ್ರೇಣಿ :
ಸಹಾಯಕ ಹುದ್ದೆ : ರೂ.30350 – 58250.
ಪ್ರಥಮ ದರ್ಜೆ ಸಹಾಯಕ ಹುದ್ದೆ : ರೂ.27650 – 52650

ಅರ್ಜಿ ಸಲ್ಲಿಕೆ ಹೇಗೆ?
 ಕೆಪಿಎಸ್‌ಸಿ ವೆಬ್‌ಸೈಟ್‌ www.kpsc.kar.nic.in ಗೆ ಭೇಟಿ ನೀಡಿ.
ಮೊದಲ ಹಂತದಲ್ಲಿ ಅಭ್ಯರ್ಥಿಗಳು ತಮ್ಮ ವಿವರ, ಶೈಕ್ಷಣಿಕ ಅರ್ಹತೆ ವಿವರ ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ.
ಎರಡನೇ ಹಂತವಾಗಿ ಇಲಾಖೆ ಕೇಳಲಾದ ಇತರೆ ವಿವರ ನೀಡಿ ಅಪ್ಲಿಕೇಶನ್‌ ಅನ್ನು ಸಬ್‌ಮಿಟ್‌ ಮಾಡಿ.
ಮೂರನೇ ಹಂತದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕದ ಜೊತೆಗೆ ಎಲ್ಲಾ ಅಭ್ಯರ್ಥಿಗಳು ಪ್ರೋಸೆಸಿಂಗ್ ಚಾರ್ಜ್‌ ರೂ.35 ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 06-02-2020
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-03-2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 07-03-2020
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ದಿನಾಂಕ : 09-05-2020
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 10-05-2020

Leave A Reply

Your email address will not be published.