Agniveer Recruitment 2023 : ಅಗ್ನಿವೀರ್ ಹುದ್ದೆಗೆ ಉದ್ಯೋಗಾವಕಾಶ, ಮೇ 29 ರಿಂದ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯು ಅಗ್ನಿವೀರ್ ನೇಮಕಾತಿ (Agniveer Recruitment 2023) ಅಧಿಕೃತ ಅಧಿಸೂಚನೆ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅಗ್ನಿವೀರ್ ಅಧಿಕೃತ ವೆಬ್‌ಸೈಟ್ ಆದ agniveernavy.cdac.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಮೇ 29 ರಂದು ಪ್ರಾರಂಭವಾಗುತ್ತದೆ ಮತ್ತು ಜೂನ್ 15, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಅಭಿಯಾನವು ಸಂಸ್ಥೆಯಲ್ಲಿ 1638 ಹುದ್ದೆಗಳನ್ನು ಭರ್ತಿ ಮಾಡುತ್ತದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ವಿದ್ಯಾರ್ಹತೆ ವಿವರ :
ಭಾರತೀಯ ನೌಕಾಪಡೆಯು ಅಗ್ನಿವೀರ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಿಕ್ಷಣ ಸಚಿವಾಲಯ, ಸರಕಾರದಿಂದ ಗುರುತಿಸಲ್ಪಟ್ಟ ಶಾಲಾ ಶಿಕ್ಷಣ ಮಂಡಳಿಗಳಿಂದ ರಸಾಯನಶಾಸ್ತ್ರ / ಜೀವಶಾಸ್ತ್ರ / ಕಂಪ್ಯೂಟರ್ ಸೈನ್ಸ್, ಗಣಿತ ಮತ್ತು ಭೌತಶಾಸ್ತ್ರ ಈ ವಿಷಯಗಳಲ್ಲಿ ಕನಿಷ್ಠ ಒಂದು ವಿಷಯದಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಭಾರತೀಯ ನೌಕಾಪಡೆಯು ಅಗ್ನಿವೀರ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ ೧೭ ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ ೨೧ ವರ್ಷ ವಯಸ್ಸು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :
ಭಾರತೀಯ ನೌಕಾಪಡೆಯು ಅಗ್ನಿವೀರ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳನ್ನು ಒಳಗೊಂಡಿರುತ್ತದೆ. ಅಂದರೆ ಶಾರ್ಟ್‌ಲಿಸ್ಟಿಂಗ್ (ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ), ‘ಲಿಖಿತ ಪರೀಕ್ಷೆ, ಪಿಎಫ್‌ಟಿ ಮತ್ತು ನೇಮಕಾತಿ ವೈದ್ಯಕೀಯ ಪರೀಕ್ಷೆ’. ಪ್ರಶ್ನೆಪತ್ರಿಕೆಯು ಕಂಪ್ಯೂಟರ್ ಆಧಾರಿತವಾಗಿದ್ದು ಒಟ್ಟು 100 ಪ್ರಶ್ನೆಗಳನ್ನು ಹೊಂದಿರುತ್ತದೆ. ಪ್ರತಿಯೊಂದೂ 01 ಅಂಕಗಳನ್ನು ಹೊಂದಿರುತ್ತದೆ.

ಇದನ್ನೂ ಓದಿ : UPSC CES Prelims Exams 2023 : ನಾಳೆ ಯುಪಿಎಸ್ ಸಿ ಪರೀಕ್ಷೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಅರ್ಜಿ ಶುಲ್ಕ :
ಭಾರತೀಯ ನೌಕಾಪಡೆಯು ಅಗ್ನಿವೀರ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಪರೀಕ್ಷಾ ಶುಲ್ಕ ರೂ. 550/- ಜೊತೆಗೆ ಶೇ. 18ರಷ್ಟು ಜಿಎಸ್‌ಟಿಯನ್ನು ಅಭ್ಯರ್ಥಿಯು ಆನ್‌ಲೈನ್ ಅಪ್ಲಿಕೇಶನ್ ಸಮಯದಲ್ಲಿ ನೆಟ್ ಬ್ಯಾಂಕಿಂಗ್ ಮೂಲಕ ಅಥವಾ ವೀಸಾ/ಮಾಸ್ಟರ್/ರುಪೇ ಕ್ರೆಡಿಟ್/ಡೆಬಿಟ್ ಕಾರ್ಡ್/ಯುಪಿಐ ಬಳಸಿ ಆನ್‌ಲೈನ್ ಮೋಡ್ ಮೂಲಕ ಪಾವತಿಸಬೇಕಾಗುತ್ತದೆ. ಪರೀಕ್ಷಾ ಶುಲ್ಕವನ್ನು ಯಶಸ್ವಿಯಾಗಿ ಪಾವತಿಸಿದ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆಗೆ ಪ್ರವೇಶ ಪತ್ರವನ್ನು ನೀಡಲಾಗುತ್ತದೆ.

Agniveer Recruitment 2023 : Agniveer Vacancy, Application Invitation from May 29

Comments are closed.