ಸೋಮವಾರ, ಏಪ್ರಿಲ್ 28, 2025
Homejob NewsAgriculture Insurance Company of India Recruitment 2023 : ಕೃಷಿ ವಿಮಾ ಕಂಪೆನಿಯಲ್ಲಿ ಡಿಗ್ರಿ...

Agriculture Insurance Company of India Recruitment 2023 : ಕೃಷಿ ವಿಮಾ ಕಂಪೆನಿಯಲ್ಲಿ ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ

- Advertisement -

ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ (Agriculture Insurance Company of India Recruitment 2023) ಫೆಬ್ರವರಿ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಹುದ್ದೆಗಳ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಅಗ್ರಿಕಲ್ಚರ್ ಇನ್ಶುರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 20 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಮ್ಯಾನೇಜ್‌ಮೆಂಟ್ ಟ್ರೈನಿ
ವೇತನ : ರೂ.60000/- ಪ್ರತಿ ತಿಂಗಳು

ಕೃಷಿ ವಿಮಾ ಕಂಪೆನಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಮ್ಯಾನೇಜ್‌ಮೆಂಟ್ ಟ್ರೈನಿ (ಆಕ್ಚುರಿಯಲ್) : 10 ಹುದ್ದೆಗಳು
ಮ್ಯಾನೇಜ್‌ಮೆಂಟ್ ಟ್ರೈನಿ (ಹಣಕಾಸು ಮತ್ತು ಹೂಡಿಕೆ) : 10 ಹುದ್ದೆಗಳು

ಕೃಷಿ ವಿಮಾ ಕಂಪೆನಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಮ್ಯಾನೇಜ್‌ಮೆಂಟ್ ಟ್ರೈನಿ (ಆಕ್ಚುರಿಯಲ್) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ಮ್ಯಾನೇಜ್‌ಮೆಂಟ್ ಟ್ರೈನಿ (ಹಣಕಾಸು ಮತ್ತು ಹೂಡಿಕೆ) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಸಿಎ, ಎಎಫ್‌ಎ, ಐಸಿಎಐ, ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಫೆಬ್ರವರಿ 01, 2023 ರಂತೆ ಕನಿಷ್ಠ 21 ವರ್ಷ ವಯಸ್ಸನ್ನು ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳಿಗೆ : 03 ವರ್ಷಗಳು
SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
PWD ಅಭ್ಯರ್ಥಿಗಳಿಗೆ : 10 ವರ್ಷಗಳು

ಅರ್ಜಿ ಶುಲ್ಕ :
SC/ST/PwBD ಅಭ್ಯರ್ಥಿಗಳಿಗೆ : ರೂ.100/-
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.500/-

ಪಾವತಿ ವಿಧಾನ:
ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು NEFT/IMPS ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದೆ.

ಆಯ್ಕೆ ಪ್ರಕ್ರಿಯೆ:
ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಎಡಿಎ ನೇಮಕಾತಿ 2023 : ಎಲೆಕ್ಟ್ರಿಷಿಯನ್, ಡ್ರಾಫ್ಟ್ಸ್‌ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : BMRCL ನೇಮಕಾತಿ 2023 : ಅಗ್ನಿಶಾಮಕ ಇನ್ಸ್‌ಪೆಕ್ಟರ್, ಅಸೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಕೆನರಾ ಬ್ಯಾಂಕ್ ನೇಮಕಾತಿ 2023 : ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 ಮಾರ್ಚ್ 2023

Agriculture Insurance Company of India Recruitment 2023 : Job opportunity for degree passers in Agriculture Insurance Company

RELATED ARTICLES

Most Popular