ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ; ವೇತನ 1 ಲಕ್ಷಕ್ಕಿಂತಲೂ ಅಧಿಕ
AIIMS Jodhpur Recruitment 2025: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸಹಾಯಕ ಪ್ರಾಧ್ಯಾಪಕ ಗ್ರೂಪ್– A ಹುದ್ದೆಗಳಿಗೆ ಅಧಿಕೃತ ನೇಮಕಾತಿ ಪ್ರಕಟಣೆ ಹೊರಡಿಸಿದೆ.
ಏಮ್ಸ್ನಲ್ಲಿ ಕೆಲಸ ಮಾಡಬೇಕೆಂಬ ಆಸೆ ಇಟ್ಟುಕೊಂಡ ವೈದ್ಯರಿಗೆ ಇದು ಸುವರ್ಣಾವಕಾಶವಾಗಿದೆ. ಈ ಅಧಿಸೂಚನೆಯ ಪ್ರಕಾರ ಜೋಧಪುರ ಏಮ್ಸ್ನಲ್ಲಿ ಒಟ್ಟು 109 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ.
ಆಸಕ್ತ , ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 24 ರವರೆಗೆ ಜೋಧಪುರ ಏಮ್ಸ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹತೆ ಮತ್ತು ಮಾನದಂಡಗಳು
ಹುದ್ದೆಯ ಹೆಸರು
ಸಹಾಯಕ ಪ್ರಾಧ್ಯಾಪಕ ಗ್ರೂಪ್ ಎ ಹುದ್ದೆ
ಹುದ್ದೆಯ ಸಂಖ್ಯೆ
109 ಹುದ್ದೆಗಳು
ಶೈಕ್ಷಣಿಕ ಅರ್ಹತೆ
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತದ ಮಾನ್ಯತೆ ಪಡೆದ ಸಂಸ್ಥೆಯಿಂದ ಎಂಡಿ, ಎಂಬಿಬಿಎಸ್ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ತಿಳಿಯಲು ಜೋಧಪುರ ಏಮ್ಸ್ನ ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡುವ ಮೂಲಕ ಪರಿಶೀಲಿಸಬಹುದಾಗಿದೆ.
ವೇತನ ಶ್ರೇಣಿ
ಸಹಾಯಕ ಪ್ರಾಧ್ಯಾಪಕ ಗ್ರೂಪ್ ಎ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,01, 500 ರೂ. ದಿಂದ 1,23,100 ರೂ.ಗಳವರೆಗೆ ವೇತನ ನೀಡಲಾಗುವುದು.
ಸಹಾಯಕ ಪ್ರಾಧ್ಯಾಪಕ ಗ್ರೂಪ್ ಎ ಹುದ್ದೆ ನೇಮಕಾತಿ ಅಧಿಸೂಚನೆಗೆ ಇಲ್ಲಿ ಕ್ಲಿಕ್ಕಿಸಿ.
ಅರ್ಜಿ ಶುಲ್ಕ
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 3000ರೂ.ಗಳನ್ನು ಹಾಗೂ ಎಸ್ಸಿ/ಎಸ್ಟಿ ಮತ್ತು ದಿವ್ಯಾಂಗ ವರ್ಗದವರು 200 ರೂ.ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಇದನ್ನೂ ಓದಿ: ಸೆಪ್ಟೆಂಬರ್ ಮೊದಲ ವಾರಕ್ಕೆ ಮುಂದೂಡಲ್ಪಟ್ಟ SSC CGL ಪರೀಕ್ಷೆ: ಸಿಟಿ ಇಂಟಿಮೇಷನ್ ಸ್ಲಿಪ್, ದಿನಾಂಕ ಪರಿಶೀಲಿಸುವುದು ಹೇಗೆ?
ಅರ್ಜಿ ಸಲ್ಲಿಕೆ ಹೇಗೆ?
– ಅಭ್ಯರ್ಥಿಗಳು ಏಮ್ಸ್ ಜೋಧಪುರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
– ಮಖಪುಟದಲ್ಲಿರುವ ನೇಮಕಾತಿ ವಿಭಾಗಕ್ಕೆ ಹೋಗಿ ಅಲ್ಲಿ ಡೈರಕ್ಟ್ ಬೇಸಿಸ್ ಮೇಲೆ ಕ್ಲಿಕ್ಕಿಸಿ.
– ನಂತರ ಅನ್ವಯಿಸುವ ಲಿಂಕ್ ಮೇಲೆ ಕ್ಲಿಕ್ಕಿಸಿ ಅರ್ಜಿ ಸಲ್ಲಿಸಲು ಪ್ರಾರಂಭಿಸಿ.
– ಅಲ್ಲಿ ಕೇಳಿರುವ ವೈಯಕ್ತಿಕ ಮಾಹಿತಿ ಮತ್ತು ಶೈಕ್ಷಣಿಕ ಮಾಹಿತಿಯನ್ನು ಭರ್ತಿ ಮಾಡಿ.
– ಬಳಿಕ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ನಮೂನೆಯನ್ನು ಸಲ್ಲಿಸಿ.
– ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ ಭವಿಷ್ಯದ ಉಲ್ಲೇಖಕ್ಕಾಗಿ ಅದರ ಪ್ರಿಂಟ್ಔಟ್ ತೆಗೆದುಕೊಳ್ಳಿ.
ಇದನ್ನೂ ಓದಿ: APPSC ಫಾರೆಸ್ಟ್ ಆಫೀಸರ್ ಪರೀಕ್ಷೆ ಹಾಲ್ ಟಿಕೆಟ್ ಡೌನ್ಲೋಡ್ ಮಾಡುವುದು ಹೇಗೆ?
(AIIMS Jodhpur Recruitment 2025 released notification for the post of faculty group A)



