ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ(Air India express recruitment) ಖಾಲಿರುವ ಟ್ರೈನಿ ಕ್ಯಾಬಿನ್ ಕ್ರೂ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತುಆಸಕ್ತ ಅಭ್ಯರ್ಥಿಗಳು ನವೆಂಬರ್ 12, 2022 ರಂದು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಿರಬೇಕಾಗಿದೆ.
Air India express recruitmentನಲ್ಲಿ ಖಾಲಿರುವ ಹುದ್ದೆಗಳ ಸಂಪೂರ್ಣ ವಿವರ :
ಹುದ್ದೆಗಳ ಸಂಖ್ಯೆ : ನಿಗದಿಪಡಿಸಿಲ್ಲ
ಉದ್ಯೋಗ ಸ್ಥಳ : ಮಂಗಳೂರು – ಕರ್ನಾಟಕ
ಹುದ್ದೆಯ ಹೆಸರು : ಟ್ರೈನಿ ಕ್ಯಾಬಿನ್ ಕ್ರ್ಯೂ
ಸಂಬಳ : ಏರ್ ಇಂಡಿಯಾ ಎಕ್ಸ್ಪ್ರೆಸ್ ನಿಯಮಗಳ ಪ್ರಕಾರ
ವಿದ್ಯಾರ್ಹತೆ ವಿವರ :
ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ :
ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 27 ವರ್ಷ ವಯಸ್ಸಿನವರಾಗಿರಬೇಕು.
ಆಯ್ಕೆ ಪ್ರಕ್ರಿಯೆ :
ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಖಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಇಲ್ಲಿ ತಿಳಿಸಿರುವ ಸ್ಥಳಕ್ಕೆ ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ಓಷನ್ ಪರ್ಲ್ 3-ಸ್ಟಾರ್ ಹೋಟೆಲ್, ನವಭಾರತ್ ಸಿರ್, ಕೊಡಿಯಾಲ್ ಬೈಲ್, ಮಂಗಳೂರು 575003 ನವೆಂಬರ್ 12, 2022ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕಾಗಿದೆ.
ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 28-10-2022
ವಾಕ್-ಇನ್ ದಿನಾಂಕ : 12-11-2022
ಇದನ್ನೂ ಓದಿ : UAS Dharwad Recruitment 2022 : ಧಾರವಾಡ ಕೃಷಿ ವಿವಿಯಲ್ಲಿ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ : Recruitment 2022 : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ : 265 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಏರ್ ಇಂಡಿಯಾ ಎಕ್ಸ್ಪ್ರೆಸ್ನ ಅಧಿಕೃತ ವೆಬ್ಸೈಟ್ ಆದ airindiaexpress.in ಗೆ ಸಂಪರ್ಕಿಸಬೇಕಾಗಿದೆ.
Air India express recruitment Application Invitation for Trainee Cabin Crew Posts