ಎಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್! ಏರ್ಪೋರ್ಟ್ ಅಥೋರಿಟಿ ಆಫ್ ಇಂಡಿಯಾದಲ್ಲಿದೆ 976 ಹುದ್ದೆಗಳು
Airport Authority Of India Recruitment 2025: ಎಂಜಿನಿಯರಿಂಗ್ ಮುಗಿಸಿ ಸರಕಾರಿ ನೌಕರಿ ಮಾಡಬೇಕೆಂಬ ಕನಸು ಹೊತ್ತಿರುವವರಿಗೆ ಇದೊಂದು ಸುವರ್ಣಾವಕಾಶ. ಏರ್ಪೋರ್ಟ್ ಅಥೋರಿಟಿ ಆಫ್ ಇಂಡಿಯಾವು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆ ಅಡಿಯಲ್ಲಿ ಏರ್ಪೋರ್ಟ್ ಅಥೋರಿಟಿ ಆಫ್ ಇಂಡಿಯಾವು ಒಟ್ಟು 976 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಏರ್ಪೋರ್ಟ್ ಅಥೋರಿಟಿ ಆಫ್ ಇಂಡಿಯಾದಲ್ಲಿ ಜೂನಿಯರ್ ಎಂಜಿನಿಯರ್ ಆಗಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆಗಸ್ಟ್ 28, 2025 ರಿಂದ ಪ್ರಾರಂಭವಾಗಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಏರ್ಪೋರ್ಟ್ ಅಥೋರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: MBA ಮಾಡಿದವರಿಗೆ ವೆಲ್ತ್ ಮ್ಯಾನೇಜರ್ ಆಗುವ ಸುವರ್ಣಾವಕಾಶ: ಯೂನಿಯನ್ ಬ್ಯಾಂಕ್ನಲ್ಲಿದೆ 250 ಹುದ್ದೆಗಳು
ಹುದ್ದೆಯ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್ ಆಫಿಸರ್
ಒಟ್ಟು ಹುದ್ದೆಗಳು
ಏರ್ಪೋರ್ಟ್ ಜೂನಿಯರ್ ಆಫೀಸರ್ ಹುದ್ದೆಗೆ ಒಟ್ಟು 976 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ (ಆರ್ಕಿಟೆಕ್ಚರ್) 11 ಹುದ್ದೆಗಳು, ಜೂನಿಯರ್ ಎಕ್ಸಿಕ್ಯೂಟಿವ್ (ಸಿವಿಲ್) 199 ಹುದ್ದೆಗಳು, ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಿಕಲ್) 208 ಹುದ್ದೆಗಳು, ಜೂನಿಯರ್ ಎಕ್ಸಿಕ್ಯೂಟಿವ್ (ಎಲೆಕ್ಟ್ರಾನಿಕ್ಸ್) 527 ಹುದ್ದೆಗಳು ಮತ್ತು ಜೂನಿಯರ್ ಎಕ್ಸಿಕ್ಯೂಟಿವ್ (ಮಾಹಿತಿ ತಂತ್ರಜ್ಞಾನ) 31 ಹುದ್ದೆಗಳು ಸೇರಿವೆ.
ವಯೋಮಿತಿ
ಏರ್ಪೋರ್ಟ್ ಜೂನಿಯರ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 27 ವರ್ಳಿಗೆ ನಿಗದಿಪಡಿಸಲಾಗಿದೆ. ವಿಶೇಷ ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಶೈಕ್ಷಣಿಕ ಅರ್ಹತೆ
ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆರ್ಕಿಟೆಕ್ಚರ್/ಎಂಜಿನಿಯರಿಂಗ್/ಕಂಪ್ಯೂಟರ್ ಎಂಜಿನಿಯರಿಂಗ್/ಐಟಿ/ಎಲೆಕ್ಟ್ರಾನಿಕ್ಸ್ ಮುಂತಾದ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ಇದಲ್ಲದೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗೇಟ್ ಪರೀಕ್ಷೆಯ ಅಂಕಪಟ್ಟಿಯನ್ನು ಸಹ ಹೊಂದಿರಬೇಕು.
ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000 ರೂ. ಗಳಿಂದ 1,40,000ರೂ. ಗಳವರೆಗೆ ವೇತನ ನೀಡಲಾಗುವುದು.
ಅರ್ಜಿ ಶುಲ್ಕ
ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸಹ ಭರಿಸಬೇಕಾಗುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು 300 ರೂ. ಎಂದು ನಿಗದಿಪಡಿಸಲಾಗಿದೆ.
ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ವಿವರ ತಿಳಿಯಲು ಇಲ್ಲಿ ಕ್ಲಿಕ್ಕಿಸಿ
ಇದನ್ನೂ ಓದಿ: 10ನೇ ತರಗತಿ ಪಾಸಾದವರಿಗೆ ಗುಡ್ ನ್ಯೂಸ್ : 3588 ಬಿಎಸ್ಎಫ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
(Airport Authority Of India released 976 posts for junior executive recruitment 2025)



