ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನ (Animal Husbandry Corporation of India 2023) ಕೌಶಲ ತರಬೇತಿ ಕೇಂದ್ರದಲ್ಲಿ ಅಗತ್ಯ ಇರುವ 2800ಕ್ಕೂ ಅಧಿಕ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆ ಹೆಸರು : ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌
ಪೋಸ್ಟ್‌ಗಳ ಸಂಖ್ಯೆ : 2826 ಹುದ್ದೆಗಳು
ಹುದ್ದೆಯ ಹೆಸರು : ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಕೇಂದ್ರ ಮೇಲ್ವಿಚಾರಕ : 314 ಹುದ್ದೆಗಳು
ಸಹಾಯಕ ಕೇಂದ್ರ ಮೇಲ್ವಿಚಾರಕ : 628 ಹುದ್ದೆಗಳು
ಕಛೇರಿ ಸಹಾಯಕ : 314 ಹುದ್ದೆಗಳು
ತರಬೇತುದಾರರು : 942 ಹುದ್ದೆಗಳು
ಮಲ್ಟಿ ಟಾಸ್ಕಿಂಗ್‌ ಅಸಿಸ್ಟಂಟ್ : 628 ಹುದ್ದೆಗಳು

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ :

  • ಕೇಂದ್ರ ಮೇಲ್ವಿಚಾರಕ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ಸಹಾಯಕ ಕೇಂದ್ರ ಮೇಲ್ವಿಚಾರಕ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.
  • ಕಛೇರಿ ಸಹಾಯಕ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.
  • ತರಬೇತುದಾರರು : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪಶುಪಾಲನಾ ವಿಷಯದಲ್ಲಿ ಡಿಪ್ಲೊಮ ಪಾಸ್‌ ಮಾಡಿರಬೇಕು.
  • ಮಲ್ಟಿ ಟಾಸ್ಕಿಂಗ್‌ ಅಸಿಸ್ಟಂಟ್ : ಈ ಹುದ್ದೆಗಳಿಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾಗಿರಬೇಕು.

ವಯೋಮಿತಿ ವಿವರ :
ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ರೂ. 10000ದಿಂದ 18000 ರೂ.ಗಳವರೆಗ ವೇತನವನು ನೀಡಲಾಗುತ್ತದೆ.

ಅರ್ಜಿ ಶುಲ್ಕ :
ಕೇಂದ್ರ ಮೇಲ್ವಿಚಾರಕ : ರೂ. 945/-
ಸಹಾಯಕ ಕೇಂದ್ರ ಮೇಲ್ವಿಚಾರಕ : ರೂ. 828/-
ಕಛೇರಿ ಸಹಾಯಕ : ರೂ. 708/-
ತರಬೇತುದಾರರು : ರೂ. 591/-
ಮಲ್ಟಿ ಟಾಸ್ಕಿಂಗ್‌ ಅಸಿಸ್ಟಂಟ್ : ರೂ. 472/-

ಇದನ್ನೂ ಓದಿ : ಪೋಸ್ಟ್ ಆಫೀಸ್ ನೇಮಕಾತಿ 2023 : SSLC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ : ಆದಾಯ ತೆರಿಗೆ ಇಲಾಖೆ ನೇಮಕಾತಿ 2023 : ತೆರಿಗೆ ಸಹಾಯಕ, ಇನ್ಸ್ಪೆಕ್ಟರ್‌ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಕೃಷಿ ಇಲಾಖೆ ಹೊಸ ನೇಮಕಾತಿ 2023 : ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 5 ಫೆಬ್ರವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27 ಫೆಬ್ರವರಿ 2023

Animal Husbandry Corporation of India 2023 : Animal Husbandry Corporation of India Limited 2023 : Application Invitation for Various Posts

Comments are closed.