ಭಾರತೀಯ ಸೇನೆ ನೇಮಕಾತಿ 2023 : ಅಗ್ನಿಶಾಮಕ, ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ


ಭಾರತೀಯ ಸೇನೆಯಲ್ಲಿ ಖಾಲಿ ಇರುವ ಸಹಾಯಕ, ಅಗ್ನಿಶಾಮಕ & ಟ್ರೇಡಸ್ಮಾನ್‌ ಹುದ್ದೆಗಳ ನೇಮಕಾತಿ (AOC Recruitment 2023) ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆಯ ಹೆಸರು : ಭಾರತೀಯ ಸೇನೆ (AOC)
ಹುದ್ದೆಗಳ ಸಂಖ್ಯೆ : 1793 ಹುದ್ದೆಗಳು
ಹುದ್ದೆಯ ಹೆಸರು : ಸಹಾಯಕ, ಅಗ್ನಿಶಾಮಕ, ಟ್ರೇಡಸ್ಮಾನ್
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್‌

ವಿದ್ಯಾರ್ಹತೆ :
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು 27 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಭಾರತೀಯ ಸೇನೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗುತ್ತದೆ. ಇನ್ನು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ ಶ್ರೇಣಿ :
ಸಹಾಯಕ : ರೂ.18000-56900/-
ಟ್ರೇಡಸ್ಮಾನ್‌ : ರೂ.18000-56900/-
ಅಗ್ನಿಶಾಮಕ : ರೂ.19900 – 63200/-

ಅರ್ಜಿ ಶುಲ್ಕ :
ಭಾರತೀಯ ಸೇನೆ ನೇಮಕಾತಿಯ ಅಧಿಕೃತ ಅಧಿಸೂಚನೆಗಳ ಪ್ರಕಾರ ಅಭ್ಯರ್ಥಿಗಳ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಭಾರತೀಯ ಸೇನೆ ನೇಮಕಾತಿಯ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ದೈಹಿಕ ದಕ್ಷತೆ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : NWDA Recruitment 2023 : ವಿವಿಧ ನಿರ್ದೇಶಕ, ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : South Indian Bank Recruitment 2023 : ವಿವಿಧ ರಾಷ್ಟ್ರೀಯ ಮುಖ್ಯಸ್ಥರು, ಪ್ರೊಬೇಷನರಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಧಾರವಾಡ ಇಕೋರ್ಟ್ ನೇಮಕಾತಿ 2023 : 33 ಬೆರಳಚ್ಚುಗಾರ-ನಕಲುದಾರ, ಪ್ಯೂನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಜನವರಿ 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 22 ಫೆಬ್ರವರಿ 2023

AOC Recruitment 2023 : Indian Army Recruitment 2023 : Apply for Fireman, Assistant and Various Posts

Comments are closed.