IOCL ನಿಂದ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ: ಈ ಅರ್ಹತೆಯಿದ್ದವರು ಫೆಬ್ರವರಿ 10 ರೊಳಗೆ ಅರ್ಜಿ ಸಲ್ಲಿಸಿ

IOCL Recruitment 2026: ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಗುಡ್‌ ನ್ಯೂಸ್‌. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನ ಪೈಪ್‌ಲೈನ್ ವಿಭಾಗದಲ್ಲಿ ಖಾಲಿ ಇರುವ 394 ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜನವರಿ 28 ರಿಂದ ಪ್ರಾರಂಭವಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು NAPS ಮತ್ತು NATS ಪೋರ್ಟಲ್‌ಗಳಿಗೆ ಬೇಟಿ ನೀಡಿ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನ ಫೆಬ್ರವರಿ 10, 2026 ಆಗಿದೆ.

ಹುದ್ದೆಯ ವಿವರ

ಈ ನೇಮಕಾತಿಯ ಮೂಲಕ IOCL ದೇಶಾದ್ಯಂತ ವಿವಿಧ ಭಾಗಗಳಲ್ಲಿ ಖಾಲಿ ಇರುವ 394 ಹುದ್ದೆಗಳನ್ನು ಭರ್ತಿ ಮಾಡಲಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಹುದ್ದೆಗೆ ಅನುಗುಣವಾಗಿ 3 ವರ್ಷಗಳ (ಅಥವಾ XII (ಎಸ್‌ಸಿ)/ಐಟಿಐ ನಂತರ ಲ್ಯಾಟರಲ್ ಎಂಟ್ರಿ) ಡಿಪ್ಲೊಮಾ/12ನೇ ತರಗತಿ/ಪೂರ್ಣ ಸಮಯದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಪೈಪ್‌ಲೈನ್ ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ ಗರಿಷ್ಠ ವಯಸ್ಸು 24 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಇದನ್ನೂ ಓದಿ: ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ 2026: ಜೂನಿಯರ್ ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಖಾಲಿ ಹುದ್ದೆಗಳಿಗೆ ನೇಮಿಸಲಾಗುತ್ತದೆ.

ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.

ಅರ್ಜಿ ಸಲ್ಲಿಕೆ ಹೇಗೆ?

ಐಒಸಿಎಲ್‌ ನ ನೇಮಕಾತಿಯಲ್ಲಿ ವಿವಿಧ ಪೋರ್ಟಲ್‌ಗಳ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಟ್ರೇಡ್ ಅಪ್ರೆಂಟಿಸ್: apprenticeshipindia.gov.in
ತಂತ್ರಜ್ಞ ಅಪ್ರೆಂಟಿಸ್: nats.education.gov.in/student_register.php
ಟ್ರೇಡ್ ಅಪ್ರೆಂಟಿಸ್ (ಸಹಾಯಕ-ಮಾನವ ಸಂಪನ್ಮೂಲ/ಅಕೌಂಟೆಂಟ್): nats.education.gov.in/student_register.php

ಈ ಪೋರ್ಟಲ್‌ನಲ್ಲಿ ನೋಂದಾಯಿಸಿದ ನಂತರ ಅಭ್ಯರ್ಥಿಗಳು ಪೈಪ್‌ಲೈನ್ಸ್‌ ಪೋರ್ಟಲ್‌ ಗೆ ಭೇಟಿ ನೀಡಿ 2ನೇ ಹಂತದ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories