BSF ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೆ ದಿನ
BSF Head Constable Vacancy 2025: ಭಾರತದ ಗಡಿ ರಕ್ಷಣೆ ಮಾಡುವ ಗಡಿ ಭದ್ರತಾ ಪಡೆ (BSF) ಉದ್ಯೋಗ ಬಯಸುವ ಯುವಜನರಿಗೆ ಸುವರ್ಣಾವಕಾಶ ನೀಡಿದೆ.
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ತಮ್ಮ ಕನಸು ಸಾಕಾರಗೊಳಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.
ಗಡಿ ಭದ್ರತಾ ಪಡೆ (BSF) ಹೆಡ್ ಕಾನ್ಸ್‌ಟೇಬಲ್, ರೇಡಿಯೋ ಆಪರೇಟರ್ ಮತ್ತು ರೇಡಿಯೋ ಮೆಕ್ಯಾನಿಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.
ಬಿಎಸ್‌ಎಫ್‌ಗೆ ಅರ್ಜಿ ಸಲ್ಲಿಸಲು ಇಂದು, ಸೆಪ್ಟೆಂಬರ್ 23, 2025 ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಿಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ತಕ್ಷಣವೇ ಸಲ್ಲಿಸಿ. ಇಲ್ಲವಾದರೆ ಇಂದಿನ ನಂತರ ಅರ್ಜಿ ಸಲ್ಲಿಸುವ ವಿಂಡೋ ಮುಚ್ಚಲಾಗುತ್ತದೆ. ಅರ್ಜಿ ಇನ್ನೂ ಸಲ್ಲಿಸದಿದ್ದರೆ ಈಗಲೇ ಅರ್ಜಿ ಸಲ್ಲಿಸಿ.
ಅರ್ಹತೆ ಮತ್ತು ಮಾನದಂಡಗಳು
ನೇಮಕಾತಿ ವಿವರ
ಬಿಎಸ್‌ಎಫ್‌ನ ನೇಮಕಾತಿ ಅಭಿಯಾನದಲ್ಲಿ ಒಟ್ಟು 1,121 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅವುಗಳಲ್ಲಿ 910 ಹುದ್ದೆಗಳು ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಆಪರೇಟರ್) ಮತ್ತು 211 ಹುದ್ದೆಗಳು ಹೆಡ್ ಕಾನ್ಸ್‌ಟೇಬಲ್ (ರೇಡಿಯೋ ಮೆಕ್ಯಾನಿಕ್) ಗೆ ಮೀಸಲಿಡಲಾಗಿದೆ.
ವಿದ್ಯಾರ್ಹತೆ
ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಯು 10 ನೇ ತರಗತಿಯಲ್ಲಿ ಉತ್ತೀರ್ಣನಾಗಿರಬೇಕು. ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ/ಸಂಸ್ಥೆಯಿಂದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳೊಂದಿಗೆ ಕನಿಷ್ಠ 60% ಅಂಕಗಳೊಂದಿಗೆ ಪಿಯುಸಿ ಅಥವಾ 12 ನೇ ತರಗತಿಯಲ್ಲಿ ಉತ್ತೀರ್ಣನಾಗಿರಬೇಕು. ಸಂಬಂಧಿತ ವಿಷಯದಲ್ಲಿ 2 ವರ್ಷಗಳ ಐಟಿಐ ಪ್ರಮಾಣಪತ್ರವನ್ನು ಪಡೆದಿರಬೇಕು.
ಇದನ್ನೂ ಓದಿ: ಕ್ರೀಡಾಪಟುಗಳಿಗೆ ಗುಡ್ ನ್ಯೂಸ್! ದಕ್ಷಿಣ ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ ನೇಮಕಾತಿ
ವಯೋಮಿತಿ
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು ಗರಿಷ್ಠ ವಯಸ್ಸು 28 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಅರ್ಜಿ ಶುಲ್ಕ
ಅರ್ಜಿ ನಮೂನೆಯನ್ನು ಭರ್ತಿ ಮಾಡುವುದರ ಜೊತೆಗೆ, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳ ಅಭ್ಯರ್ಥಿಗಳು 100 ರೂ. ಶುಲ್ಕ (+ತರಿಗೆ) ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಉಚಿತವಾಗಿ ಫಾರ್ಮ್ ಅನ್ನು ಭರ್ತಿ ಮಾಡಬಹುದಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
- ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು.
- ಬಿಎಸ್‌ಎಫ್ ಹೆಡ್ ಕಾನ್ಸ್‌ಟೇಬಲ್ ನೇಮಕಾತಿ 2025 ಅರ್ಜಿ ನಮೂನೆಯನ್ನು ಭರ್ತಿ ಮಾಡಲು, ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡಬೇಕು.
- ವೆಬ್‌ಸೈಟ್‌ನ ಮುಖಪುಟದಲ್ಲಿ ಪ್ರಸ್ತುತ ನೇಮಕಾತಿ ಹುದ್ದೆಗಳಿಗೆ ಅನ್ವಯಿಸು ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
- ಮೊದಲಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಪೂರ್ಣಗೊಂಡ ನಂತರ ಅಂತಿಮವಾಗಿ, ನಿಗದಿತ ಶುಲ್ಕವನ್ನು ಪಾವತಿಸಬೇಕು (ಅನ್ವಯಿಸಿದರೆ).
- ಬಳಿಕೆ ಇನ್ನೊಮ್ಮೆ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಓದಿ, ಅರ್ಜಿ ಸಲ್ಲಿಸಬೇಕು.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಪ್ರಿಂಟ್‌ಔಟ್ ತೆಗೆದುಕೊಳ್ಳಬೇಕು.
ಇದನ್ನೂ ಓದಿ: ಎಸ್‌ಬಿಐ ಕ್ಲರ್ಕ್ ಪ್ರಿಲಿಮ್ನರಿ ಪರೀಕ್ಷೆಯ ಹಾಲ್ ಟಿಕೆಟ್ ಬಿಡುಗಡೆ: ಡೌನ್‌ಲೋಡ್ ಮಾಡುವುದು ಹೇಗೆ?
(Apply for BSF Head Constable Vacancy 2025 immediately)



