ಡಿಪ್ಲೊಮಾ ಆದವರಿಗೆ ಗುಡ್‌ ನ್ಯೂಸ್‌! ರೈಲ್ವೆ ಇಲಾಖೆಯಲ್ಲಿ ಜೂನಿಯರ್‌ ಎಂಜಿನಿಯರ್‌ ಆಗುವ ಸುವರ್ಣಾವಕಾಶ

RRB JE Vacancy 2025: ಸರ್ಕಾರಿ ಉದ್ಯೋಗ ಪಡೆಯಬೇಕೆಂಬ ಕನಸು ಹೊತ್ತ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯು ಅವಕಾಶವನ್ನು ಒದಗಿಸಿದೆ.

ರೈಲ್ವೆ ನೇಮಕಾತಿ ಮಂಡಳಿ (RRB) ಜೂನಿಯರ್ ಎಂಜಿನಿಯರ್‌ ಹುದ್ದೆಗಳಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಆರ್‌ಆರ್‌ಬಿಯು ಒಟ್ಟು 2569 ಜೂನಿಯರ್‌ ಎಂಜಿನಿಯರ್‌ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಆಸಕ್ತ ಅಭ್ಯರ್ಥಿಗಳ ನವೆಂಬರ್‌ 30ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಡಿಸೆಂಬರ್‌ 2 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಮತ್ತು ಮಾನದಂಡಗಳನ್ನು ತಿಳಿಯೋಣ.

ಹುದ್ದೆಯ ಹೆಸರು

ಜೂನಿಯರ್‌ ಎಂಜಿನಿಯರ್‌, ಡಿಪೋ ಮೆಟೀರಿಯಲ್‌ ಸೂಪರಿಂಟೆಂಡೆಂಟ್ ಹಾಗೂ ರಾಸಾಯನಿಕ ಮತ್ತು ಮಾಪನಶಾಸ್ತ್ರ ಸಹಾಯಕ

ಒಟ್ಟು ಹುದ್ದೆಗಳು

ಆರ್‌ಆರ್‌ಬಿಯು ಒಟ್ಟು 2569 ಹುದ್ದೆಗಳಿಗಾಗಿ ಅಧಿಸೂಚನೆ ಹೊರಡಿಸಿದೆ.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಹಾಗೂ ಗರಿಷ್ಠ ವಯಸ್ಸು 33 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ವೇತನ

ಮೂಲ ವೇತನ: 35,400 + ಭತ್ಯೆಗಳು

ಇದನ್ನೂ ಓದಿ: ಎಲ್‌ಐಸಿ ಎಎಒ ಪ್ರಿಲಿಮ್ಸ್ ಪರೀಕ್ಷೆ 2025 ಫಲಿತಾಂಶ ಪ್ರಕಟ

ವಿದ್ಯಾರ್ಹತೆ

ಆರ್‌ಆರ್‌ಬಿ ಜೂನಿಯರ್‌ ಎಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಅಥವಾ ದೂರಸಂಪರ್ಕದಲ್ಲಿ ಪದವಿ ಅಥವಾ ಡಿಪ್ಲೊಮಾ ಪಡೆದಿರಬೇಕು.

ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗೆ, ಡಿಪ್ಲೊಮಾ ಎಂಜಿನಿಯರಿಂಗ್‌ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.

ಕೆಮಿಕಲ್ ಮತ್ತು ಮೆಟ್ರೋಲಾಜಿಕಲ್ ಸೂಪರ್‌ವೈಸರ್ ಹುದ್ದೆಗೆ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದಲ್ಲಿ ವಿಜ್ಞಾನದಲ್ಲಿ ಕನಿಷ್ಠ 55 ಪ್ರತಿಶತ ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ

ಜೂನಿಯರ್‌ ಎಂಜಿನಿಯರಿಂಗ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

SC, ST, ಮಾಜಿ ಸೈನಿಕರು, PWBD, ಟ್ರಾನ್ಸ್ಜೆಂಡರ್ ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳು (EBC) ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಇತರ ಅಭ್ಯರ್ಥಿಗಳು 500 ರೂ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. CBT 1 ರಲ್ಲಿ ಉತ್ತೀರ್ಣರಾದ ನಂತರ ಈ ಅಭ್ಯರ್ಥಿಗಳಿಗೆ 400 ರೂ ಮರುಪಾವತಿಸಲಾಗುತ್ತದೆ.

ಮೀಸಲು ವರ್ಗದ ಅಭ್ಯರ್ಥಿಗಳಿಗೆ ಪೂರ್ಣ ಹಣ ಮರುಪಾವತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮೊದಲು ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್ rrbapply.gov.in ಗೆ ಭೇಟಿ ನೀಡಬೇಕು.

ಅಲ್ಲಿ ನಿಮ್ಮ ವಿವರಗಳನ್ನು ನೀಡುವ ಮೂಲಕ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.

ನಂತರ ಆ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗಿನ್ ಮಾಡಿ.

ಈಗ ಸಂಬಂಧಿತ ನೇಮಕಾತಿ ಲಿಂಕ್‌ಗೆ ಹೋಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಪೋಷಕರ ಹೆಸರು, ವಿಳಾಸ ಮತ್ತು ಇತರ ಪ್ರಮುಖ ಮಾಹಿತಿಯ ತಪ್ಪಿಲ್ಲದಂತೆ ಭರ್ತಿ ಮಾಡಿ.

ಎಲ್ಲಾ ಬಾಕ್ಸ್‌ಗಳನ್ನು ಭರ್ತಿ ಮಾಡಿದ ನಂತರ, ನಿಮ್ಮ ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.

ಈಗ ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.

ಅಂತಿಮವಾಗಿ ಫಾರ್ಮ್‌ನ ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್‌ಔಟ್‌ ತೆಗೆದುಕೊಳ್ಳಿ.

ಇದನ್ನೂ ಓದಿ: ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಆಗುವ ಸುವರ್ಣಾವಕಾಶ: ನವೆಂಬರ್ 17 ರ ಒಳಗೆ ಅರ್ಜಿ ಸಲ್ಲಿಸಿ

(apply for junior engineer post in railway recruitment board within November 30)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories