ಡಿಗ್ರಿ ಆದವರಿಗೆ ಆಫೀಸರ್ ಆಗುವ ಸುವರ್ಣಾವಕಾಶ: ಬ್ಯಾಂಕ್ ಆಫ್ ಮಹಾರಾಷ್ಟ್ರಕ್ಕೆ ಇಂದೇ ಅರ್ಜಿ ಸಲ್ಲಿಸಿ
Bank of Maharashtra Recruitment 2025: ಬ್ಯಾಂಕ್ ಆಫ್ ಮಹಾರಾಷ್ಟ್ರ ಖಾಲಿ ಇರುವ ವಿವಿಧ ಹುದ್ದೆಗಳಿಗಾಗಿ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ.
ಅದರ ಪ್ರಕಾರ ಬ್ಯಾಂಕ್ ಆಫ್ ಮಹಾರಾಷ್ಟ್ರವು ಸೆಷಲಿಸ್ಟ್ ಅಫೀಸರ್ ಸ್ಕೇಲ್ II, III, IV, V, VI ಹಾಗೂ VII ರ ಅಡಿಯಲ್ಲಿ ಒಟ್ಟು 350 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.
ಅರ್ಹ, ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ಆಫ್ ಮಹಾರಾಷ್ಟ್ರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವು ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು, ಕೊನೆಯ ದಿನ ಸೆಪ್ಟೆಂಬರ್ 30, 2025 ಆಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆ ಮತ್ತು ಮಾನದಂಡಗಳು ಹೀಗಿವೆ…
ಅರ್ಹತೆ ಮತ್ತು ಮಾನದಂಡಗಳು
ವಿದ್ಯಾರ್ಹತೆ
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಹುದ್ದೆಯ ಪ್ರಕಾರ ಸಂಬಂಧಪಟ್ಟ ಕ್ಷೇತ್ರದಲ್ಲಿ ಪದವಿ/ಎಂಜಿನಿಯರಿಂಗ್/ ಸ್ನಾತಕೋತ್ತರ ಪದವಿ ಇತ್ಯಾದಿಗಳನ್ನು ಹೊಂದಿರಬೇಕು.
ವಯೋಮಿತಿ
ಅಭ್ಯರ್ಥಿಯ ಕನಿಷ್ಠ ವಯಸ್ಸು 22 ವರ್ಷಗಳು ಮತ್ತು ಗರಿಷ್ಠ ವಯಸ್ಸು 55 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯಸ್ಸಿನಲ್ಲಿ ಸಡಿಲಿಕೆಯಿರುತ್ತದೆ.
ಈ ಹುದ್ದೆಗೆ ಅಗತ್ಯವಿರುವ ಇತರೆ ಅರ್ಹತೆಗಳನ್ನು ಪರೀಕ್ಷಿಸಲು ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.
ವೇತನ ಶ್ರೇಣಿ
ಸ್ಕೇಲ್ II: ರೂ 64,820 ರಿಂದ 93,960
ಸ್ಕೇಲ್ III: ರೂ 85,920 ರಿಂದ 1,05,280
ಸ್ಕೇಲ್ IV: ರೂ 1,02,300 ರಿಂದ 1,20,940
ಸ್ಕೇಲ್ V: ರೂ 1,20,940 ರಿಂದ 1,35,020
ಸ್ಕೇಲ್ VI: ರೂ 1,40,500 ರಿಂದ 1,56,500
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಭರಿಸಬೇಕಾಗುತ್ತದೆ. ಮೀಸಲಾತಿ ರಹಿತ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳು 1180 ರೂ. ಶುಲ್ಕವನ್ನು ಹಾಗೂ ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಡಿ ವರ್ಗದವರಿಗೆ ಕೇವಲ 118 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮೊದಲಿಗೆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ bankofmaharashtra.in ಗೆ ಭೇಟಿ ನೀಡಿ.
ವೆಬ್‌ಸೈಟ್‌ನ ಮುಖಪುಟದಲ್ಲಿರುವ, ಕರೆಂಟ್ ಓಪನಿಂಗ್ ಗೆ ಹೋಗಿ.
ಅಲ್ಲಿ ನೇಮಕಾತಿಗೆ ಸಂಬಂಧಿಸಿದ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
ಈಗ ನಿಮ್ಮ ಸ್ವಂತ ಖಾತೆಯನ್ನು ರಚಿಸಲು ರಜಿಸ್ಟರ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕೇಳಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ನೋಂದಾಯಿಸಿ.
ನೋಂದಣಿ ನಂತರ, ಅಭ್ಯರ್ಥಿಗಳು ಲಾಗಿನ್ ಆಗುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಅಂತಿಮವಾಗಿ, ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಬೇಕು.
ಬಳಿಕ ಸಂಪೂರ್ಣವಾಗಿ ಭರ್ತಿ ಮಾಡಿದ ನಮೂನೆಯನ್ನು ಇನ್ನೊಮ್ಮೆ ಪರಿಶೀಲಿಸಿ ಅರ್ಜಿಯನ್ನು ಸಲ್ಲಿಸಬೇಕು.
ಭವಿಷ್ಯದ ಉಲ್ಲೇಖಗಳಿಗಾಗಿ ಅರ್ಜಿ ಸಲ್ಲಿಸಿದ ಪ್ರತಿಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಇದನ್ನೂ ಓದಿ: ಕ್ರೀಡಾಪಟುಗಳಿಗೆ ಗುಡ್ ನ್ಯೂಸ್! ದಕ್ಷಿಣ ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ ನೇಮಕಾತಿ
(Apply for the post of Officer specialist in Bank of Maharashtra Recruitment 2025)



