ದೇಶಾದ್ಯಂತ ಆಧಾರ್‌ ಆಪರೇಟರ್‌ ಸೂಪರ್‌ವೈಸರ್‌ ಹುದ್ದೆಗೆ ನೇಮಕಾತಿ: ಐಟಿಐ, ಡಿಪ್ಲೊಮಾ ಆದವರು ಇಂದೇ ಅರ್ಜಿ ಸಲ್ಲಿಸಿ

ದೇಶಾದ್ಯಂತ ಆಧಾರ್‌ ಆಪರೇಟರ್‌ ಸೂಪರ್‌ವೈಸರ್‌ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಓದಿ.

Aadhaar Operator Supervisor Recruitment: ಭಾರತದ ವಿಶಿಷ್ಟ ಗುರುತಿನ ಚೀಟಿ ಆಧಾರ್‌. 12 ಅಂಕಿಗಳ ಈ ವಿಶಿಷ್ಟ ಗುರುತಿನ ಚೀಟಿ ಭಾರತದ ನಿವಾಸಿಗಳ ಪ್ರಮುಖ ಗುರುತಿನ ಪುರಾವೆಯಾಗಿದೆ. ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಆಧಾರ್‌ ಕಡ್ಡಾಯವಾಗಿದೆ. ಭಾರತ ಸರ್ಕಾರ ಇದೀಗ ದೇಶಾದ್ಯಂತ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ ಆಧಾರ್‌ ಸೂಪರ್‌ವೈಸರ್‌ ಹುದ್ದೆಗೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಈ ನೇಮಕಾತಿ ಮೂಲಕ ದೇಶಾದ್ಯಂತ ಒಟ್ಟು 252 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅಧಿಕೃತ ಪ್ರಕಟಣೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್‌ 10, 2026 ಕೊನೆಯ ದಿನವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಗಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು ಇಲ್ಲಿದೆ ಓದಿ.

ಶೈಕ್ಷಣಿಕ ಅರ್ಹತೆ

ಆಧಾರ್ ಆಪರೇಟರ್‌ ಸೂಪರ್‌ವೈಸರ್‌ ನೇಮಕಾತಿಯಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಪಿಯುಸಿ/ 12 ನೇ ತರಗತಿ/ ಐಟಿಐ/ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತಮ ಕಂಪ್ಯೂಟರ್‌ ಜ್ಞಾನ ಅತ್ಯಗತ್ಯ.

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ನಂತರ ಸಂದರ್ಶನ, ದಾಖಲೆ ಪರಿಶೀಲನೆ ನಡೆಸಲಾಗುತ್ತದೆ. ಬಳಿಕ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಆಧಾರ್‌ ಆಪರೇಟರ್‌ ಸೂಪರ್‌ವೈಸರ್ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಕೆ ಹೇಗೆ?

ಆಧಾರ್‌ ಆಪರೇಟರ್‌ ಸೂಪರ್‌ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ csc.gov.in/ask ಪೋರ್ಟಲ್‌ಗೆ ಭೇಟಿ ನೀಡಬೇಕು.

ನಂತರ ರಾಜ್ಯವನ್ನು ಆಯ್ಕೆ ಮಾಡಿ. ಈಗ ಅಪ್ಲೈ ಬಟನ್‌ ಮೇಲೆ ಕ್ಲಿಕ್ಕಿಸಿ

ಅರ್ಜಿ ಲಿಂಕ್‌ ಮೇಲೆ ಕ್ಲಿಕ್ಕಿಸಿ, ಅಗತ್ಯ ವಿವರಗಳನ್ನು ಭರ್ತಿ ಮಾಡಿ ನಿಮ್ಮ ಹೆಸರು ನೋಂದಾಯಿಸಿಕೊಳ್ಳಿ.

ಇದಾದ ಬಳಿಕ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.

ಅಂತಿಮವಾಗಿ ಇನ್ನೊಮ್ಮೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಿ.

ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್‌ಔಟ್‌ ಅನ್ನು ತೆಗೆದುಕೊಳ್ಳಿ.

 

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories