Bangalore DCC Bank Recruitment 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನಿಯಮಿತ. ಬೆಂಗಳೂರು ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ (Bangalore DCC Bank Recruitment 2023) ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬೆಂಗಳೂರು ಡಿಸಿಸಿ ಬ್ಯಾಂಕ್)
ಹುದ್ದೆಗಳ ಸಂಖ್ಯೆ : 96 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಸ್ಟೆನೋಗ್ರಾಫರ್, ಕಂಪ್ಯೂಟರ್ ಆಪರೇಟರ್, ಡ್ರೈವರ್, ಜೆಎ
ವೇತನ : ರೂ.23500-47650/- ಪ್ರತಿ ತಿಂಗಳು

ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ಶಾಖಾ ವ್ಯವಸ್ಥಾಪಕ : 4 ಹುದ್ದೆಗಳು
  • ಹಿರಿಯ ಸಹಾಯಕ : 19 ಹುದ್ದೆಗಳು
  • ಸ್ಟೆನೋಗ್ರಾಫರ್ಸ್ : 1 ಹುದ್ದೆಗಳು
  • ಕಿರಿಯ ಸಹಾಯಕರು : 43 ಹುದ್ದೆಗಳು
  • ಕಂಪ್ಯೂಟರ್ ಆಪರೇಟರ್ : 2 ಹುದ್ದೆಗಳು
  • ಚಾಲಕ : 4 ಹುದ್ದೆಗಳು
  • ಗುಂಪು D : 23 ಹುದ್ದೆಗಳು

ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಬ್ರಾಂಚ್ ಮ್ಯಾನೇಜರ್, ಹಿರಿಯ ಸಹಾಯಕ : ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ಸ್ಟೆನೋಗ್ರಾಫರ್ಸ್ : ಪಿಯುಸಿ, ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಉತ್ತೀರ್ಣರಾಗಿರಬೇಕು.
  • ಕಿರಿಯ ಸಹಾಯಕರು : ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.
  • ಕಂಪ್ಯೂಟರ್ ಆಪರೇಟರ್ : ಪಿಯುಸಿ, ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್
  • ಚಾಲಕ, ಗುಂಪು ಡಿ : ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಫೆಬ್ರವರಿ 28, 2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ & 3ಬಿ & ಒಬಿಸಿ ಅಭ್ಯರ್ಥಿಗಳು : 03 ವರ್ಷಗಳು
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು : 05 ವರ್ಷಗಳು

ಅರ್ಜಿ ಶುಲ್ಕ:
ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : ರೂ.1500/-
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು : ರೂ.750/-

ಪಾವತಿ ವಿಧಾನ :
ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿದೆ.

ಆಯ್ಕೆ ಪ್ರಕ್ರಿಯೆ:
ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ನಿಗದಿತ ಅರ್ಹತಾ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳದ ವಿವರ :

  • ಶಾಖಾ ವ್ಯವಸ್ಥಾಪಕ : ರೂ.40900-78200/-
  • ಹಿರಿಯ ಸಹಾಯಕ : ರೂ.37900-70850/-
  • ಸ್ಟೆನೋಗ್ರಾಫರ್ಸ್ : ರೂ.37900-70850/-
  • ಕಿರಿಯ ಸಹಾಯಕರು : ರೂ.30350-58250/-
  • ಕಂಪ್ಯೂಟರ್ ಆಪರೇಟರ್ : ರೂ.30350-58250/-
  • ಚಾಲಕ ರೂ.27650-52650/-
  • ಗುಂಪು D ರೂ.23500-47650/-

ಇದನ್ನೂ ಓದಿ : Union Bank Recruitment 2023 : ಚಾರ್ಟರ್ಡ್ ಅಕೌಂಟೆಂಟ್, ಸೀನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : Indian Post Recruitment 2023 : ಅಂಚೆ ಇಲಾಖೆಯಲ್ಲಿ 40889 ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30 ಜನವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಫೆಬ್ರವರಿ 2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 28 ಫೆಬ್ರವರಿ 2023

Bangalore DCC Bank Recruitment 2023 : Application Invitation for Various Posts

Comments are closed.