ಬೆಂಗಳೂರು ರೈಲ್ವೆ ನೇಮಕಾತಿ : ಎಸ್‌ಎಸ್‌ಎಲ್‌ಸಿ ಪಾಸ್‌ ಆದವರಿಗೆ ಉದೋಗ್ಯಾವಕಾಶ

ಬೆಂಗಳೂರು ರೈಲು ವೀಲ್‌ ಫ್ಯಾಕ್ಟರಿಯಲ್ಲಿ (Bangalore Railway Recruitment) ಅಗತ್ಯವಿರುವ ಖಾಲಿ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅಧಿಕೃತವಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಸಂಸ್ಥೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಬೆಂಗಳೂರು ರೈಲು ವೀಲ್‌ ಫ್ಯಾಕ್ಟರಿಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆ ಹೆಸರು : ಬೆಂಗಳೂರು ರೈಲ್‌ ವೀಲ್‌ ಫ್ಯಾಕ್ಟರಿ
ಪೋಸ್ಟ್‌ಗಳ ಸಂಖ್ಯೆ : 169 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಅಪ್ಪ್ರೆಂಟಿಸ್‌ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆಫ್‌ಲೈನ್‌

ವಿದ್ಯಾರ್ಹತೆ :
ರೈಲು ವೀಲ್‌ ಫ್ಯಾಕ್ಟರಿ ಬೆಂಗಳೂರು ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾಗಿರಬೇಕು.

ವಯೋಮಿತಿ ವಿವರ :
ರೈಲು ವೀಲ್‌ ಫ್ಯಾಕ್ಟರಿ ಬೆಂಗಳೂರು ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
ರೈಲು ವೀಲ್‌ ಫ್ಯಾಕ್ಟರಿ ಬೆಂಗಳೂರು ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ನೀಡಲಾಗುತ್ತದೆ.

ವೇತನ ಶ್ರೇಣಿ ವಿವರ :
ರೈಲು ವೀಲ್‌ ಫ್ಯಾಕ್ಟರಿ ಬೆಂಗಳೂರು ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10899 ರಿಂದ 12261 ರೂವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ :
ಎಸ್‌ಸಿ/ಎಸ್‌ಟಿ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮಾಂಡ್‌ ಡ್ರಾಫ್ಟ್‌ ಅಥವಾ ಐಪಿಓ ಮೂಲಕ ಶುಲ್ಕವ ನ್ನು ಪಾವತಿಸಬೇಕಾಗಿದೆ.

ಆಯ್ಕೆ ವಿಧಾನ :
ರೈಲು ವೀಲ್‌ ಫ್ಯಾಕ್ಟರಿ ಬೆಂಗಳೂರು ಹೊರಡಿಸಿರುವ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಗಳನ್ನು ಮೆರಿಟ್‌ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : KMF Shimul Recruitment 2023 : ಕೆಎಮ್‌ಎಫ್‌ನಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ : ಸಕ್ಕರೆ ಕಾರ್ಖಾನೆಯಲ್ಲಿ ಖಾಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಭಾರತೀಯ ಸೇನೆ ನೇಮಕಾತಿ 2023 : ಅಗ್ನಿಶಾಮಕ, ಸಹಾಯಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಫೆಬ್ರವರಿ 2023

Bangalore Railway Recruitment: Job opportunity for SSLC pass

Comments are closed.