ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಮ್ಯಾನೇಜರ್‌, ಸೀನಿಯರ್ ಮ್ಯಾನೇಜರ್‌ ನೇಮಕಾತಿ : ಒಂದು ಲಕ್ಷಕ್ಕೂ ಅಧಿಕ ವೇತನ

ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ತೆರಳಿ ಅರ್ಜಿ ಸಲ್ಲಿಸಿ.

ಬ್ಯಾಂಕ್‌ ಉದ್ಯೋಗ ಬಹಳಷ್ಟು ಪದವೀಧರರ ಕನಸು. ಇದೀಗ ಅವರ ಕನಸು ನನಸು ಮಾಡಿಕೊಳ್ಳುವ ಅವಕಾಶ ಒದಗಿ ಬಂದಿದೆ. ಬ್ಯಾಂಕ್‌ ಆಫ್‌ ಬರೋಡಾ ಮ್ಯಾನೇಜರ್‌ ಮತ್ತು ಜೂನಿಯರ್‌ ಮ್ಯಾನೇಜರ್‌ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಘೋಷಿಸಿದೆ. ಈ ನೇಮಕಾತಿ ಪ್ರಕಟಣೆಯ ಪ್ರಕಾರ ಬ್ಯಾಂಕ್ ಆಫ್‌ ಬರೋಡಾ ಒಟ್ಟು 86 ಖಾಲಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್‌ 16 ರಿಂದ ಪ್ರಾರಂಭವಾಗಿದೆ. ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಜುಲೈ 6 ರವರೆಗೆ ಅವಕಾಶ ನೀಡಲಾಗಿದೆ.

ವಿದ್ಯಾರ್ಹತೆ

ಬ್ಯಾಂಕ್‌ ಆಫ್‌ ಬರೋಡಾದ ಮ್ಯಾನೇಜರ್‌ ಮತ್ತು ಜೂನಿಯರ್ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು ಹುದ್ದೆಗೆ ಅನುಗುಣವಾಗಿ 25 ರಿಂದ 32 ವರ್ಷಗಳು. ಗರಿಷ್ಠ ವಯೋಮಿತಿ 30 ರಿಂದ 42 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಅರ್ಜಿ ಶುಲ್ಕ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹175 ಶುಲ್ಕವನ್ನು ಪಾವತಿಸಬೇಕು.

ವೇತನ

MMG/S-II ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 64,820 ರೂ., MMG/S-III ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 85,920 ರೂ. ಮತ್ತು SMG/S-IV ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 1,02,300 ರೂ. ವೇತನ ನೀಡಲಾಗುವುದು.

ಇದನ್ನೂ ಓದಿ : ಪದವೀಧರರಿಗೆ ಸುವರ್ಣಾವಕಾಶ : ಸೆಂಟ್ರಲ್‌ ಬ್ಯಾಂಕ್‌ನಿಂದ 4500 ಅಪ್ರೆಂಟಿಸ್‌ಶಿಪ್‌ ಹುದ್ದೆಗೆ ಅರ್ಜಿ ಆಹ್ವಾನ

ಪರೀಕ್ಷೆ ಮಾದರಿ

ಮೊದಲಿಗೆ ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯು ರೀಸನಿಂಗ್, ಇಂಗ್ಲಿಷ್, ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಮತ್ತು ಸಂಬಂಧಿತ ವಿಷಯಗಳಿಂದ 150 ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಒಟ್ಟು 225 ಅಂಕಗಳನ್ನು ಹೊಂದಿರುತ್ತದೆ. ಪರೀಕ್ಷೆಯ ಅವಧಿ 150 ನಿಮಿಷಗಳು.

ಅರ್ಜಿ ಸಲ್ಲಿಕೆ ಹೇಗೆ?

ಅಭ್ಯರ್ಥಿಗಳು ಬ್ಯಾಂಕ್‌ ಆಫ್‌ ಬರೋಡಾದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories