Bank of Baroda Recruitment : ಬ್ಯಾಂಕ್ ಆಫ್ ಬರೋಡಾದಲ್ಲಿ ಪದವೀಧರರಿಗೆ‌ ಉದ್ಯೋಗಾವಕಾಶ

ಬ್ಯಾಂಕ್ ಆಫ್ ಬರೋಡಾ ನೇಮಕಾತಿ (Bank of Baroda Recruitment) ಜೂನ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಬ್ಯಾಂಕ್ ಆಫ್ ಬರೋಡಾ (BOB)
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಬೆಂಗಳೂರು
ಪೋಸ್ಟ್ ಹೆಸರು : FLC ಕೌನ್ಸಿಲರ್
ವೇತನ : ರೂ.23000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 64 ವರ್ಷ ಒಳಗಿನ ವಯಸ್ಸನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಬ್ಯಾಂಕ್ ಆಫ್ ಬರೋಡಾ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

BOB ನೇಮಕಾತಿ (FLC ಕೌನ್ಸಿಲರ್) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಪ್ರಾದೇಶಿಕ ಮುಖ್ಯಸ್ಥರು, ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ಕಚೇರಿ-ಬೆಂಗಳೂರು ಉತ್ತರ 4 ನೇ ಮಹಡಿ, 41/2, ವಿಜಯ ಟವರ್ಸ್, ಎಂಜಿ ರಸ್ತೆ, ಬೆಂಗಳೂರು – 560001 ಇವರಿಗೆ ಜೂನ್ 30, 2023ರ ಅಥವಾ ಅದಕ್ಕೂ ಮೊದಲು ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಜೂನ್‌ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಜೂನ್ 2023

Bank of Baroda Recruitment : Job opportunities for graduates in Bank of Baroda

Comments are closed.