ಪದವೀಧರರಿಗೆ ಗುಡ್‌ ನ್ಯೂಸ್‌: ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಕ್ರೆಡಿಟ್‌ ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Bank Of India Recruitment 2025: ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆದುಕೊಳ್ಳಬೇಕು ಎಂಬ ಆಸೆ ಹೊತ್ತ ಯುವ ಜನತೆಗೆ ಸುವರ್ಣಾವಕಾಶ.

ಬ್ಯಾಂಕ್‌ ಆಫ್‌ ಇಂಡಿಯಾ ಕ್ರೆಡಿಟ್‌ ಆಫಿಸರ್‌ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

ಅಧಿಸೂಚನೆಯ ಪ್ರಕಾರ ಅದು ಒಟ್ಟು 514 ಕ್ರೆಡಿಟ್ ಆಫೀಸರ್‌ಗಳನ್ನು ನೇಮಕ ಮಾಡಿಕೊಳ್ಳಲಿದೆ. ಈ ಹುದ್ದೆಗೆ ಅರ್ಜಿ ಪ್ರಕ್ರಿಯೆಯು ಡಿಸೆಂಬರ್‌ 20 ರಿಂದ ಪ್ರಾರಂಭವಾಗಿದೆ.

ಕ್ರೆಡಿಟ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜನವರಿ 5, 2026ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವಿರ ಹಾಗೂ ಮಾನದಂಡಗಳೇನು ಎಂದು ತಿಳಿಯೋಣ.

ಹುದ್ದೆಯ ಹುದ್ದೆಯ ಹೆಸರು

ಕ್ರೆಡಿಟ್‌ ಆಫೀಸರ್‌

ಒಟ್ಟು ಹುದ್ದೆಗಳು

514

ಬ್ಯಾಂಕ್‌ ಆಫ್‌ ಇಂಡಿಯಾ ನೇಮಕಾತಿ 2025 ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.

ವಯೋಮಿತಿ

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 25, 28 ಮತ್ತು 30 ವರ್ಷಗಳು ಮತ್ತು ಗರಿಷ್ಠ ವಯಸ್ಸಿನ ಮಿತಿ 35, 38 ಮತ್ತು 40 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ವೇತನ

ಗ್ರೇಡ್ ಸ್ಕೇಲ್-II ತಿಂಗಳಿಗೆ ರೂ. 67,160 ರಿಂದ ರೂ. 93,960.
ಗ್ರೇಡ್ ಸ್ಕೇಲ್-III ತಿಂಗಳಿಗೆ ರೂ. 99,320 ರಿಂದ ರೂ. 1,05,280.
ಗ್ರೇಡ್ ಸ್ಕೇಲ್-IV ತಿಂಗಳಿಗೆ ರೂ. 1,14,220 ರಿಂದ ರೂ. 1,20,940.

ಇದನ್ನೂ ಓದಿ: ನ್ಯಾಶನಲ್ ಫಾರೆನ್ಸಿಕ್ ಸೈನ್ಸ್ ಯೂನಿವರ್ಸಿಟಿ ನೇಮಕಾತಿ ಆರಂಭ: ಜನವರಿ 18ರೊಳಗೆ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ

ಕ್ರೆಡಿಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 175 ರೂ. ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 850 ರೂ.ಗಳು.

ಆಯ್ಕೆ ಪ್ರಕ್ರಿಯೆ

ಕ್ರೆಡಿಟ್ ಆಫೀಸರ್ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯು ಇಂಗ್ಲಿಷ್ ಭಾಷೆ, ರೀಸನಿಂಗ್‌, ಆಪ್ಟಿಟ್ಯೂಡ್‌ ಹಾಗೂ ಸಂಬಂಧಿತ ವಿಷಯಗಳಿಂದ 150 ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಇವು 150 ಅಂಕಗಳನ್ನು ಹೊಂದಿರುತ್ತವೆ. ಪರೀಕ್ಷೆಯ ಅವಧಿಯನ್ನು ಎರಡು ಗಂಟೆಗಳ ಕಾಲ ನಿಗದಿಪಡಿಸಲಾಗಿದೆ. ಪ್ರತಿ ತಪ್ಪು ಉತ್ತರಕ್ಕೂ ಕಾಲು ಭಾಗದಷ್ಟು ಋಣಾತ್ಮಕ ಅಂಕವನ್ನು ಸಹ ನೀಡಲಾಗುತ್ತದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

Exit mobile version