Bank Recruitment 2022: ಸಹಕಾರಿ ಬ್ಯಾಂಕ್ ನಲ್ಲಿ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(Bank Recruitment 2022)ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ 30 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕ್ ನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 14 2022 ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(Bank Recruitment 2022)ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:

ಸಂಸ್ಥೆಯ ಹೆಸರು: ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್
ಹುದ್ದೆಯ ಹೆಸರು: ಡೆಪ್ಯುಟಿ ಮ್ಯಾನೇಜರ್
ಹುದ್ದೆಗಳ ಸಂಖ್ಯೆ:30
ಉದ್ಯೋಗ ಸ್ಥಳ:ಆಂಧ್ರ ಪ್ರದೇಶ ಮತ್ತು ತೆಲಂಗಾಣ
ವೇತನ: ರೂ. 37,000

ವಯೋಮಿತಿ ವಿವರ:
ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಕನಿಷ್ಠ 20 ರಿಂದ ಗರಿಷ್ಠ32ವಯಸ್ಸಿನವರಾಗಿರಬೇಕು.

ಅರ್ಜಿ ಶುಲ್ಕ:ರೂ.1,000

ಆಯ್ಕೆ ಪ್ರಕ್ರಿಯೆ:
ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳನ್ನುಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ

ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ:
ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ)14-11-2022 ರಿಂದ14-12-2022 ರವರೆಗೆ ವಿಶಾಖಪಟ್ಟಣಂ ಸಹಕಾರಿ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್ ಆದ www.vcbl.inನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:AAI Recruitment 2022 : ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಪದವೀಧರರಿಗೆ ಉದ್ಯೋಗಾವಕಾಶ

ಇದನ್ನೂ ಓದಿ:DHFWS Haveri Recruitment 2022:119 ದಾದಿಯರು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14ನವೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14ಡಿಸೆಂಬರ್ 2022

Bank Recruitment 2022:Application Invitation for Deputy Manager Posts in Co-operative Bank

Comments are closed.