BBMP Recruitment 2022 – 63 ವೈದ್ಯಕೀಯ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

(BBMP Recruitment 2022)ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 63 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನವೆಂಬರ್ 10 2022ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

BBMP Recruitment 2022 :63 ವೈದ್ಯಕೀಯ ಹುದ್ದೆಗಳ ವಿವರ:

ಸಂಸ್ಥೆಯ ಹೆಸರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)
ಹುದ್ದೆಗಳ ಸಂಖ್ಯೆ: 63
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ವೈದ್ಯಕೀಯ ಅಧಿಕಾರಿಗಳು
ವೇತನ: ರೂ.47250/- ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯಗಳಿಂದ ಎಂಬಿಬಿಎಸ್‌ (MBBS) ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸನ್ನು ಸಂಸ್ಥೆಯ ನಿರ್ಧಾರಕ್ಕೆ ಬಿಡಲಾಗಿದೆ.

ವಯೋಮಿತಿ ಸಡಿಲಿಕೆ:
ಅರ್ಹ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಈ ಸಂಸ್ಥೆ ನಿರ್ಧಾರ ಮಾಡುತ್ತದೆ.

ಇದನ್ನೂ ಓದಿ:Bank Holiday : ಬ್ಯಾಂಕ್‌ ಕೆಲಸವಿದ್ದರೆ ಇವತ್ತೆ ಮುಗಿಸಿಕೊಳ್ಳಿ, ನಾಳೆಯಿಂದ 4 ದಿನ ಬ್ಯಾಂಕ್‌ ರಜೆ

ಇದನ್ನೂ ಓದಿ:POCSO Case : ಮುರುಘಾ ಶ್ರೀ ಮತ್ತು ಇಬ್ಬರ ವಿರುದ್ಧ ಆರೋಪ ದೃಢ : ಚಿತ್ರದುರ್ಗ ಎಸ್ಪಿ

ಆಯ್ಕೆ ಪ್ರಕ್ರಿಯೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸುವುದು
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ಸೂಚಿಸಿದ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಸ್ಥಳದ ಮಾಹಿತಿ:
ನೌಕರರ ಭವನ, ಬಿಬಿಎಂಪಿ ಪ್ರಧಾನ ಕಛೇರಿ, ಎನ್‌.ಆರ್ ಚೌಕ್, ಬೆಂಗಳೂರು, ಕರ್ನಾಟಕ

ಇದನ್ನೂ ಓದಿ: Sahitya Akademi Recruitment 2022 : ಸಾಹಿತ್ಯ ಅಕಾಡೆಮಿಯಲ್ಲಿ ಸ್ಟೆನೋಗ್ರಾಫರ್ ಹಾಗೂ ಉಪ ಸಂಪಾದಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗುವ ದಿನಾಂಕ: 10-11-2022

BBMP Recruitment 2022:63 Applications invited for the post of Medical Officers

Comments are closed.