ಬೆಂಗಳೂರು ಮಹಾನಗರ ಪಾಲಿಕೆ : 3673 ಗ್ರೂಪ್‌ “ಡಿ” ವೃಂದದ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಆಹ್ವಾನ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್‌ “ಡಿ” ವೃಂದದ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ (BBMP recruitment 2023) ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಬೇಕಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ನಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಹುದ್ದೆಗಳ ಹೆಸರು : ಪೌರಕಾರ್ಮಿಕರು (ಗ್ರೂಪ್‌ ಡಿ)
ಒಟ್ಟು ಹುದ್ದೆಗಳು : 3673 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆಫ್‌ಲೈನ್‌

ಹುದ್ದೆಗಳ ವಿವರ :
ಉಳಿಕೆ ಮೂಲ ವೃಂದ : 3243 ಹುದ್ದೆಗಳು
ಕಲ್ಯಾಣ ಕರ್ನಾಟಕ ವೃಂದ : 430 ಹುದ್ದೆಗಳು

ವಿದ್ಯಾರ್ಹತೆ ವಿವರ :

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
  • ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ನೇರ ಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಸೇವೆ ಸಲ್ಲಿಸಿ ಅನುಭವವಿರುವ ಹಾಗೂ ಸದರಿ ನಿಯಮಗಳ ಜಾರಿಗೆ ಬಂದ ದಿನಾಂಕದಿಂದ (23-11-2022)ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ ವಿವರ :
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ೫೫ ವರ್ಷ ಮೀರಿರಬಾರದು.

ಸಂಬಳ ವಿವರ :
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17000 ರಿಂದ ರೂ 28950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ :
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ :
ಪಾಲಿಕೆಯ ಆಯಾ ವಾರ್ಡ್‌ಗೆ ಸಂಬಂಧಿಸಿದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಘನತ್ಯಾಜ್ಯ ನಿರ್ವಹಣೆ)ರವರ ಕಛೇರಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ : ನಗರ ಸಭೆ, ಪಟ್ಟಣ ಪಂಚಾಯತ್‌ನಲ್ಲಿ 1214 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ನಮ್ಮ ಮೆಟ್ರೋದಲ್ಲಿ ಉದ್ಯೋಗ ಅವಕಾಶ : ಮಾಸಿಕ 1.65 ಲಕ್ಷ ರೂ.‌ವೇತನ ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : ಜನವರಿ 16, 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : ಜನವರಿ 30, 2023

BBMP recruitment 2023 : Bengaluru Municipal Corporation : 3673 Group “D” Group Civil Service Vacancy Invitation

Comments are closed.