BEL ನೇಮಕಾತಿ 2023 : ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಉದ್ಯೋಗಾವಕಾಶ, 79000 ರೂ. ವೇತನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ (BEL Recruitment 2023) ಅಧಿಕೃತ ಅಧಿಸೂಚನೆ ಮೇ 2023 ರ ಮೂಲಕ ಹವಾಲ್ದಾರ್ (ಭದ್ರತೆ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳ ಸಂಖ್ಯೆ : 12 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಹವಾಲ್ದಾರ್ (ಭದ್ರತೆ)
ವೇತನ : ರೂ.20500-79000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 43 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು

ಆಯ್ಕೆ ಪ್ರಕ್ರಿಯೆ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತೆ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ DGM (HR/Central), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು-560013 ಇವರಿಗೆ ಜೂನ್‌ 06, 2023ರ ಅಥವಾ ಮೊದಲು ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : UAS ನೇಮಕಾತಿ 2023 :ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, 45000 ರೂ.ವೇತನ

ಇದನ್ನೂ ಓದಿ : Sahitya Academy Recruitment 2023 : ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವೀಧರಿಗೆ ಉದ್ಯೋಗಾವಕಾಶ, ತಿಂಗಳಿಗೆ 2 ಲಕ್ಷ ರೂ. ಅಧಿಕ ವೇತನ

ಇದನ್ನೂ ಓದಿ : ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2023 : ಪದವಿ ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ತಿಂಗಳಿಗೆ ವೇತನ 1 ಲಕ್ಷ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಮೇ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 ಜೂನ್ 2023

ಇದನ್ನೂ ಓದಿ : UPSC ನೇಮಕಾತಿ 2023 : 285 ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

BEL Recruitment 2023 : Job opportunity for SSLC passers, 79000 Rs. Salary

Comments are closed.