ಎಂಜಿನಿಯರ್‌ ಪದವೀಧರರಿಗೆ ಗುಡ್‌ ನ್ಯೂಸ್‌: ಬಿಇಎಲ್‌ನಲ್ಲಿದೆ 610 ಹುದ್ದೆಗಳು

BEL Vacancy 2025: ಭಾರತದ ರಕ್ಷಣಾಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಕಂಪನಿ ಟ್ರೈನಿ ಎಂಜಿನಿಯರ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಈ ನೇಮಕಾತಿ ಅಧಿಸೂಚನೆಯ ಮೂಲಕ ಬಿಇಎಲ್‌ ಒಟ್ಟು 610 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಬಿಇಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್‌ 7, 2025 ರಂದು ಕೊನೆಗೊಳ್ಳುತ್ತದೆ.

ಅರ್ಹತೆ ಮತ್ತು ಮಾನದಂಡಗಳು

ಹುದ್ದೆಯ ಹೆಸರು

ಟ್ರೈನಿ ಎಂಜಿನಿಯರ್‌

ಒಟ್ಟು ಹುದ್ದೆಗಳು

ಬಿಇಎಲ್‌ ಈ ನೇಮಕಾತಿ ಮೂಲಕ ಒಟ್ಟು 610 ಟ್ರೈನಿ ಎಂಜಿನಿಯರ್‌ಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ವಿದ್ಯಾರ್ಹತೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ ವಿಭಾಗದಲ್ಲಿ4 ವರ್ಷಗಳ ಬಿ.ಇ, ಬಿ.ಟೆಕ್‌ ಪದವಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಸಾಮಾನ್ಯ ಮತ್ತು ಇಡಬ್ಲೂಎಸ್‌ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 28 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಇದನ್ನೂ ಓದಿ: ಪಿಯುಸಿ ಪಾಸ್‌ ಆದವರಿಗೆ ರೈಲ್ವೆಯಲ್ಲಿ ಉದ್ಯೋಗ: 8875 ಹುದ್ದೆಗೆ ಅರ್ಜಿ

ವೇತನ

ಮೊದಲ ವರ್ಷ – 30,000 ರೂ.
ಎರಡನೇ ವರ್ಷ – 35,000 ರೂ.
ಮೂರನೇ ವರ್ಷ – 40,000 ರೂ.

ಅರ್ಜಿ ಶುಲ್ಕ

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 177 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಡಿ ವರ್ಗದ ಅಭ್ಯರ್ಥಿಗಳಿಗೆ ಅರ್ಜಿಯನ್ನುಉಚಿತವಾಗಿ ಭರ್ತಿ ಮಾಡಬಹುದಾಗಿದೆ.

ಬಿಇಎಲ್‌ನ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಕೆ ಹೇಗೆ?

  1. ಮೊದಲನೆಯದಾಗಿ ಅಭ್ಯರ್ಥಿಯಗಳು ಬಿಇಎಲ್‌ನ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಬೇಕು.
  2. ಅಲ್ಲಿ ಮುಖಪುಟದಲ್ಲಿ ನೀಡಲಾದ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  3. ಬಳಿಕ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
  4. ಇದಾದ ನಂತರ ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  5. ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ನಂತರ ಶುಲ್ಕವನ್ನು ಪಾವತಿಸಬೇಕು.
  6. ಇನ್ನೊಮ್ಮೆ ಅರ್ಜಿಯನ್ನ ಪರಿಶೀಲಿಸಿ, ಅಂತಿಮವಾಗಿ ಸಲ್ಲಿಸಬೇಕು.
  7. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಅದರ ಪ್ರಿಂಟ್‌ಔಟ್‌ ತೆಗೆದುಕೊಳ್ಳಬೇಕು.

ಇದನ್ನೂ ಓದಿ: ಐಬಿಪಿಎಸ್ ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆ ಹಾಲ್ ಟಿಕೆಟ್: ಡೌನ್‌ಲೋಡ್ ಮಾಡುವುದು ಹೇಗೆ?

(BEL Vacancy 2025 Apply 610 trainee Engineer post in BEL within October 7)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories