ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ (Belagavi District Court Recruitment 2023) ಜುಲೈ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸ್ಟೆನೋಗ್ರಾಫರ್ಸ್ ಗ್ರೇಡ್-III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಬೆಳಗಾವಿ ಜಿಲ್ಲಾ ನ್ಯಾಯಾಲಯದ ಹುದ್ದೆಗಳ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಬೆಳಗಾವಿ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಸಂಖ್ಯೆ : 13 ಹುದ್ದೆಗಳು
ಉದ್ಯೋಗ ಸ್ಥಳ : ಬೆಳಗಾವಿ
ಹುದ್ದೆಯ ಹೆಸರು : ಸ್ಟೆನೋಗ್ರಾಫರ್ ಗ್ರೇಡ್-III
ವೇತನ : ರೂ.27650-52650/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ :
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ವಾಣಿಜ್ಯ ಅಭ್ಯಾಸದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ ವಿವರ :
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 21-ಆಗಸ್ಟ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳು : 05 ವರ್ಷಗಳು
ಕ್ಯಾಟ್-IIA/IIB/IIIA ಅಭ್ಯರ್ಥಿಗಳು : 03 ವರ್ಷಗಳು
ಅರ್ಜಿ ಶುಲ್ಕ :
SC/ST/PH ಅಭ್ಯರ್ಥಿಗಳು : ಇಲ್ಲ
ಸಾಮಾನ್ಯ/ಕ್ಯಾಟ್-IIA/IIB/IIIA & IIIB ಅಭ್ಯರ್ಥಿಗಳು : ರೂ.300/-
ಪಾವತಿ ವಿಧಾನ :
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್/ಚಲನ್ ಮೂಲಕ ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : KHPT Recruitment 2023 : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21 ಜುಲೈ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21 ಆಗಸ್ಟ್ 2023
ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 24 ಆಗಸ್ಟ್ 2023
Belagavi District Court Recruitment 2023 : PUC, Diploma Passed Employment Opportunity in District Court, 50 thousand Rs.