BMTC ನೇಮಕಾತಿ 2023 : ವಿವಿಧ 636 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ನಿಗಮವು (BMTC Recruitment 2023) ಫೆಬ್ರವರಿ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)
ಹುದ್ದೆಗಳ ಸಂಖ್ಯೆ : 636 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಅಪ್ರೆಂಟಿಸ್ ಹುದ್ದೆಗಳು
ಸ್ಟೈಪೆಂಡ್ : ರೂ.6000-9000/- ಪ್ರತಿ ತಿಂಗಳು

ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಪೂರ್ಣ ಸಮಯದ ಅಪ್ರೆಂಟಿಸ್‌ಗಳು : 550 ಹುದ್ದೆಗಳು
ಡಿಪ್ಲೊಮಾ ಅಪ್ರೆಂಟಿಸ್‌ಗಳು : 43 ಹುದ್ದೆಗಳು
ಪದವೀಧರ ಅಪ್ರೆಂಟಿಸ್‌ಗಳು : 43 ಹುದ್ದೆಗಳು

ವಿದ್ಯಾರ್ಹತೆ ವಿವರ :
ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ನಿಗಮದ ನೇಮಕಾತಿ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೊಮಾ ಹಾಗೂ ಬ್ಯಾಚುಲರ್ ಆಫ್ ಇಂಜಿನಿಯರಿಂಗ್‌ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ:
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 16 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮೇಲೆ ಆಯ್ಕೆ ಮಾಡಲಾಗುತ್ತದೆ.

ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನ (ತಿಂಗಳಿಗೆ) ವಿವರ :
ಪೂರ್ಣ ಸಮಯದ ಅಪ್ರೆಂಟಿಸ್‌ಗಳು : ರೂ.6000-7000/-
ಡಿಪ್ಲೊಮಾ ಅಪ್ರೆಂಟಿಸ್ : ರೂ.8000/-
ಪದವೀಧರ ಅಪ್ರೆಂಟಿಸ್‌ಗಳು : ರೂ.9000/-

BMTC ನೇಮಕಾತಿ (ಅಪ್ರೆಂಟಿಸ್) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ?
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್ ಕಟ್ಟಡ, ಆಡಳಿತ ಇಲಾಖೆ, 5 ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣದ ಪಕ್ಕದಲ್ಲಿ, ಬೆಂಗಳೂರು – 560027 ಗೆ ಮಾರ್ಚ್‌ 15, 2023 ರಂದು ಅಥವಾ ಮೊದಲು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : ಸೈಂಟಿಫಿಕ್ ರಿಸರ್ಚ್ ಸಂಸ್ಥೆಯ ಸಹಾಯಕ ಹುದ್ದೆಗಾಗಿ ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : CBHFL ನೇಮಕಾತಿ 2023 : ವಿವಿಧ ಮ್ಯಾನೇಜರ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಬಿಬಿಎಂಪಿ ನೇಮಕಾತಿ 2023 : ವಿವಿಧ ವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21 ಫೆಬ್ರವರಿ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಮಾರ್ಚ್ 2023

BMTC Recruitment 2023 : Application Invitation for Various 636 Apprentice Posts

Comments are closed.