ಬ್ಯಾಂಕ್ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್! ಬ್ಯಾಂಕ್ ಆಫ್ ಬರೋಡಾ ದಿಂದ 104 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಹೆಡ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳು ಸೇರಿದಂತೆ ಒಟ್ಟೂ 104 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ
BOB Recruitment 2026: ಬ್ಯಾಂಕ್‌ನಲ್ಲಿ ಕೆಲಸ ಮಾಡಬೇಕೆಂದು ತಯಾರಿ ನಡೆಸುತ್ತಿರುವವರಿಗೆ ಗುಡ್ ನ್ಯೂಸ್. ಬ್ಯಾಂಕ್ ಆಫ್ ಬರೋಡಾ ಗ್ರೂಪ್ ಹೆಡ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳು ಸೇರಿದಂತೆ ಒಟ್ಟೂ 104 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಪ್ರಕಟಣೆಯ ಪ್ರಕಾರ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮಾರ್ಚ್ 27 ರಿಂದ ಪ್ರಾರಂಭವಾಗುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 16, 2026 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಇರಬೇಕಾದ ಅರ್ಹತೆಗಳೇನು ಎಂದು ನೋಡೋಣ.
ಯಾರು ಅರ್ಜಿ ಸಲ್ಲಿಸಬಹುದು?
ಬ್ಯಾಂಕ್ ಆಫ್ ಬರೋಡಾದ ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿಯ ಜೊತೆಗೆ ಸ್ನಾತಕೋತ್ತರ ಪದವಿ ಹೊಂದಿರಬೇಕು. ಜೊತೆಗೆ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೊಮಾ ಮಾಡಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು ಹುದ್ದೆಗಳಿಗೆ ಅನುಗುಣವಾಗಿ 24, 27 ಮತ್ತು 31 ವರ್ಷಗಳು. ಅದೇ ರೀತಿ ಗರಿಷ್ಠ ವಯೋಮಿತಿಯು ಕ್ರಮವಾಗಿ 35, 40 ಮತ್ತು 45 ವರ್ಷಗಳಾಗಿವೆ. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಾಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಇದನ್ನೂ ಓದಿ: Karnataka police recruitment : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ನ್ಯೂಸ್ : 5 ವರ್ಷಗಳ ವಯೋಮಿತಿ ಸಡಿಲಿಸಿದ ರಾಜ್ಯ ಸರ್ಕಾರ
ಅರ್ಜಿ ಶುಲ್ಕ
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಭರಿಸಬೇಕು. ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹850 ಮತ್ತು ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ವ್ಯಕ್ತಿಗಳಿಗೆ ₹175 ಆಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿಕೆ ಮಾರ್ಚ್ 27 (ಇಂದಿನಿಂದ) ಪ್ರಾರಂಭವಾಗುತ್ತದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಪಾಲಿಸಬಹುದು.
- ಮೊದಲಿಗೆ ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
- ವೆಬ್‌ಸೈಟ್‌ನ ಮುಖಪುಟದಲ್ಲಿರುವ ಆನ್‌ಲೈನ್ ನೋಂದಣಿ ಮೇಲೆ ಕ್ಲಿಕ್ಕಿಸಿ.
- ಬಳಿಕ ನಿಮ್ಮ ಹೆಸರು, ವಿಳಾಸ ಇತ್ಯಾದಿ ವೈಯಕ್ತಿಕ ಮಾಹಿತಿ ದಾಖಲಿಸಿ.
- ಫಾರ್ಮ್ ಭರ್ತಿ ಮಾಡಿದ ನಂತರ ನೋಂದಣಿ ಶುಲ್ಕ ಪಾವತಿಸಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಕೊನೆಯಲ್ಲಿ ಫಾರ್ಮ್ ಅನ್ನು ಮತ್ತೊಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.



