10ನೇ ತರಗತಿ ಪಾಸಾದವರಿಗೆ ಗುಡ್‌ ನ್ಯೂಸ್‌ : 3588 ಬಿಎಸ್‌ಎಫ್‌ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಆಹ್ವಾನ

BSF Constable Recruitment 2025: ಭಾರತದ ಗಡಿ ಭದ್ರತಾ ಪಡೆ(BSF) ಕಾನ್ಸ್‌ಟೇಬಲ್‌ ಹುದ್ದೆಗಾಗಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬಿಎಸ್‌ಎಫ್‌ ಒಟ್ಟೂ 3588 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅದರ ಪ್ರಕಾರ ಪುರುಷ ಅಭ್ಯರ್ಥಿಗಳಿಗೆ 3406 ಹುದ್ದೆಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ 182 ಹುದ್ದೆಗಳನ್ನು ಮೀಸಲಿಡಿಸಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಬಿಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್‌ rectt.bsf.gov.in ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್‌ 23 ಆಗಿದೆ.

ಹುದ್ದೆಯ ಹೆಸರು

ಕಾನ್ಸ್‌ಟೇಬಲ್‌ (ಟ್ರೇಡ್ಸ್‌ಮನ್‌) ಬಿಎಸ್‌ಎಫ್‌

ಖಾಲಿ ಹುದ್ದೆಗಳು

ಬಿಎಸ್‌ಎಫ್‌ ಒಟ್ಟು 3588 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಿದೆ. ಅದರಲ್ಲಿ 3406 ಪುರುಷ ಅಭ್ಯರ್ಥಿಗಳು ಮತ್ತು 182 ಮಹಿಳಾ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ.

ವಯೋಮಿತಿ

ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಲ ಬಯಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳಿಗೆ ನಿಗದಿಪಡಿಸಲಾಗಿದೆ. ವಿಶೇಷ ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಕೆಯಿರುತ್ತದೆ.

ಇದನ್ನೂ ಓದಿ: SBI ಜೂನಿಯರ್‌ ಅಸೋಸಿಯೇಟ್‌ 5180 ಹುದ್ದೆಗಳಿಗೆ ಅರ್ಜಿ ಆಹ್ವಾನ: ಪದವೀಧರರಿಗೆ ಗುಡ್‌ ನ್ಯೂಸ್‌!

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಭಾರತದ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ವ್ಯಾಪಾರದಲ್ಲಿ ಸಂಬಂಧಿಸಿದ 2 ವರ್ಷದ ಪ್ರಮಾಣ ಪತ್ರದ ಕೋರ್ಸ್‌ ಮಾಡಿರಬೇಕು.

ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ರೂ. ನಿಂದ 69,100 ರೂ.ಗಳವರೆಗೆ ವೇತನ ನೀಡಲಾಗುವುದು.

ಬಿಎಸ್‌ಎಫ್‌ ಕಾನ್ಸ್‌ಟೇಬಲ್‌ ಹುದ್ದೆ : ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳಲ್ಲಿ ಮಾಡಲಾಗುತ್ತದೆ. ಮೊದಲನೇ ಹಂತದಲ್ಲಿ ಪಿಎಸ್‌ಟಿ ಮತ್ತು ಪಿಇಟಿ ಪರೀಕ್ಷೆ, ಎರಡನೇ ಹಂತದಲ್ಲಿ ಲಿಖಿತ ಪರೀಕ್ಷೆ ಮತ್ತು ಮೂರನೇ ಹಂತದಲ್ಲಿ ದಾಖಲೆ ಪರಿಶೀಲನೆ ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ, ಸಾಮಾನ್ಯ ಜ್ಞಾನ, ಇಂಗ್ಲಿಷ್, ಗಣಿತ ಮತ್ತು ಹಿಂದಿ ವಿಷಯಗಳಿಗೆ ಸಂಬಂಧಿಸಿದ 100 ಅಂಕಗಳ 100 ಬಹು ಆಯ್ಕೆಯ ಪ್ರಶ್ನೆಗಳನ್ನು ಅಭ್ಯರ್ಥಿಗಳಿಗೆ ಕೇಳಲಾಗುತ್ತದೆ. ಪರೀಕ್ಷೆಯ ಅವಧಿ ಎರಡು ಗಂಟೆಗಳ ಕಾಲ.

ಬಿಎಸ್‌ಎಫ್‌ ಕಾನ್ಸ್‌ಟೇಬಲ್‌ ಹುದ್ದೆ : ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು, ಬಿಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ವೆಬ್‌ಸೈಟ್‌ನ ಮುಖಪುಟದಲ್ಲಿರುವ BSF ಕಾನ್ಸ್‌ಟೇಬಲ್ ನೇಮಕಾತಿ 2025 ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

ನಂತರ, ನಿಮ್ಮ ಹೆಸರು, ಇಮೇಲ್ ಐಡಿ ಮತ್ತು ಫೋನ್ ನಂಬರ್‌ ನಮೂದಿಸುವ ಮೂಲಕ ಲಾಗಿನ್ ಆಗಬೇಕು.

ಲಾಗಿನ್‌ ಆದ ನಂತರ ಅಗತ್ಯವಿರುವ ವೈಯಕ್ತಿಕ ವಿವರ, ಸ್ಕ್ಯಾನ್ ಮಾಡಿದ ದಾಖಲೆ, ಸಹಿ ಇತ್ಯಾದಿಗಳನ್ನು ಅಪ್‌ಲೋಡ್ ಮಾಡಬೇಕು.

ಕೊನೆಯದಾಗಿ ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸುವುದರ ಮೂಲಕ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.

ಅಂತಿಮವಾಗಿ ಅರ್ಜಿ ಸಲ್ಲಿಸದ ಮಾಹಿತಿಯ ಫೋಟೋ ಕಾಪಿಯನ್ನು ಡೌನ್‌ಲೋಡ್‌ ಮಾಡಿಕೊಂಡು, ಭವಿಷ್ಯದ ಉಪಯೋಗಕ್ಕಾಗಿ ಅದರ ಪ್ರಿಂಟ್‌ಔಟ್‌ ತೆಗೆದುಕೊಳ್ಳಬೇಕು.‌

ಹೆಚ್ಚಿನ ಮಾಹಿತಿ ತಿಳಿಯಲು ಬಿಎಸ್‌ಎಫ್‌ನ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.

ಇದನ್ನೂ ಓದಿ: ಭಾರತೀಯ ನೌಕಾಪಡೆಯಲ್ಲಿ ಸುವರ್ಣಾವಕಾಶ: SSC ಕಾರ್ಯನಿರ್ವಾಹಕ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(BSF Constable Recruitment 2025 Good news for candidates who have passed 10th for the post of BSF Constable)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories