BSNL ಜೂನಿಯರ್‌ ಟೆಲಿಕಾಂ ಆಫೀಸರ್‌ ನೇಮಕಾತಿ ಘೋಷಣೆ : ಎಂಜಿನಿಯರಿಂಗ್‌ ಡಿಗ್ರಿ ಇದ್ರೆ ಅರ್ಜಿ ಹಾಕಿ

ಭಾರತ್‌ ಸಂಚಾರ್‌ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಜೂನಿಯರ್‌ ಟೆಲಿಕಾಂ ಆಫೀಸರ್‌ (JTO) ಹುದ್ದೆಗೆ ನೇಮಕಾತಿ ಪ್ರಕಟಣೆಯನ್ನು ಘೋಷಿಸಿದೆ. ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಷ್ಟು?

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಆಪರೇಟರ್‌ ಕಂಪನಿಯಾದ ಭಾರತ್‌ ಸಂಚಾರ್‌ ನಿಗಮ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) ಜೂನಿಯರ್‌ ಟೆಲಿಕಾಂ ಆಫೀಸರ್‌ (JTO) ಹುದ್ದೆಗೆ ನೇಮಕಾತಿ ಪ್ರಕಟಣೆಯನ್ನು ಘೋಷಿಸಿದೆ. ಈ ನೇಮಕಾತಿ ಮೂಲಕ ಬಿಎಸ್‌ಎನ್‌ಎಲ್‌ ವಿವಿಧ ರಾಜ್ಯಗಳು ಸೇರಿದಂತೆ ಒಟ್ಟು 100 ಜೂನಿಯರ್‌ ಟೆಲಾಕಾಂ ಆಪರೇಟರ್‌ಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಕರ್ನಾಟಕದಲ್ಲಿ 26 ಹುದ್ದೆಗಳಿಗೆ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 4 ರಿಂದ ಪ್ರಾರಂಭವಾಗಲಿದೆ. ಅಭ್ಯರ್ಥಿಗಳು ಬಿಎಸ್ಎನ್‌ಎಲ್‌ನ ಅಧಿಕೃತ ವೆಬ್‌ಸೈಟ್‌ externalexam.bsnl.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೆಳಗಿನ ಅರ್ಹತೆಗಳಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ

ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ದೂರಸಂಪರ್ಕ, ಎಲೆಕ್ಟ್ರಾನಿಕ್ಸ್, ರೇಡಿಯೋ, ಕಂಪ್ಯೂಟರ್, ಎಲೆಕ್ಟ್ರಿಕಲ್, ಮಾಹಿತಿ ತಂತ್ರಜ್ಞಾನ (ಐಟಿ), ಇನ್ಸ್ಟ್ರುಮೆಂಟೇಶನ್‌ನಲ್ಲಿ ಎಂಜಿನಿಯರಿಂಗ್ ಪದವಿ ಅಥವಾ ಎಂಎಸ್ಸಿ (ಎಲೆಕ್ಟ್ರಾನಿಕ್ಸ್)/ಎಂಎಸ್ಸಿ (ಕಂಪ್ಯೂಟರ್ ಸೈನ್ಸ್) ಹೊಂದಿರಬೇಕು.

ವಯೋಮಿತಿ

ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಯ ಕನಿಷ್ಠ ವಯಸ್ಸಯ 20 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು 30 ವರ್ಷಗಳಿಗಿಂತ ಹೆಚ್ಚಿರಬಾರದು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಅರ್ಜಿ ಶುಲ್ಕ

ಈ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಲು, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳ ಅಭ್ಯರ್ಥಿಗಳು ₹2,000 ಅರ್ಜಿ ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳು ₹1,000 ಪಾವತಿಸಬೇಕು. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದು.

ಇದನ್ನೂ ಓದಿ: SSB ಕಾನ್ಸ್‌ಟೇಬಲ್ GD ಹುದ್ದೆ ನೇಮಕಾತಿ ಅಧಿಸೂಚನೆ ಪ್ರಕಟ : ಈ ಅರ್ಹತೆಗಳಿದ್ದರೆ ನೀವೂ ಅರ್ಜಿ ಸಲ್ಲಿಸಿ

ವೇತನ

ಬಿಎಸ್‌ಎನ್‌ಎಲ್ ಜೆಟಿಒ ನೇಮಕಾತಿಯಲ್ಲಿ ಆಯ್ಕೆ ಅಭ್ಯರ್ಥಿಗಳಿಗೆ ತಿಂಗಲೀಗೆ ₹16,400 ರಿಂದ ₹40,500 ರವರೆಗೆ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆ ಯಾವಾಗ ನಡೆಯಲಿದೆ?

ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಸಿಬಿಟಿ ಪರೀಕ್ಷೆಯು ಆಗಸ್ಟ್‌ 2026 ರಲ್ಲಿ ನಡೆಸಲಾಗುವುದು ಎಂದು ಬಿಎಸ್‌ಎನ್‌ಎಲ್‌ ಹೇಳಿದೆ. ಹೆಚ್ಚಿನ ಮಾಹಿತಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರರಿಶೀಲಿಸಿ.

ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories