ಕೆನರಾ ಬ್ಯಾಂಕ್ ನೇಮಕಾತಿ 2023 : ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ನೇಮಕಾತಿ (Canara Bank Recruitment 2023) ಫೆಬ್ರವರಿ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಚೀಫ್ ಡಿಜಿಟಲ್ ಆಫೀಸರ್, ಚೀಫ್ ಟೆಕ್ನಾಲಜಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಕೆನರಾ ಬ್ಯಾಂಕ್ ಹುದ್ದೆಯ ಅಧಿಸೂಚನೆ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಕೆನರಾ ಬ್ಯಾಂಕ್
ಹುದ್ದೆಗಳ ಸಂಖ್ಯೆ : 3 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಮುಖ್ಯ ಡಿಜಿಟಲ್ ಅಧಿಕಾರಿ, ಮುಖ್ಯ ತಂತ್ರಜ್ಞಾನ ಅಧಿಕಾರಿ

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ಗುಂಪಿನ ಮುಖ್ಯ ಅಪಾಯ ಅಧಿಕಾರಿ (GCRO) : 1 ಹುದ್ದೆ
  • ಮುಖ್ಯ ಡಿಜಿಟಲ್ ಅಧಿಕಾರಿ (CDO) : 1 ಹುದ್ದೆ
  • ಮುಖ್ಯ ತಂತ್ರಜ್ಞಾನ ಅಧಿಕಾರಿ (CTO) : 1 ಹುದ್ದೆ

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಗ್ರೂಪ್ ಚೀಫ್ ರಿಸ್ಕ್ ಆಫೀಸರ್ (GCRO) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸಾಗಿರಬೇಕು.
  • ಮುಖ್ಯ ಡಿಜಿಟಲ್ ಅಧಿಕಾರಿ (CDO) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯದಲ್ಲಿ ಬಿ.ಇ ಅಥವಾ ಬಿ.ಟೆಕ್, ಎಮ್‌ಸಿಎಯಲ್ಲಿ ಉತ್ತೀರ್ಣರಾಗಿರಬೇಕು.
  • ಮುಖ್ಯ ತಂತ್ರಜ್ಞಾನ ಅಧಿಕಾರಿ (CTO) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯದಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್‌, ಎಮ್‌ಸಿಎಯಲ್ಲಿ ಉತ್ತೀರ್ಣರಾಗಿರಬೇಕು.

ಕೆನರಾ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :

  • ಗುಂಪಿನ ಮುಖ್ಯ ಅಪಾಯ ಅಧಿಕಾರಿ (GCRO) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 55 ವರ್ಷಕ್ಕಿಂತ ಕಡಿಮೆ ವಯಸ್ಸನ್ನು ಹೊಂದಿರಬೇಕು.
  • ಮುಖ್ಯ ಡಿಜಿಟಲ್ ಅಧಿಕಾರಿ (CDO) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 40 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷ ವಯಸ್ಸನ್ನು ಮೀರಿರಬಾರದು.
  • ಮುಖ್ಯ ತಂತ್ರಜ್ಞಾನ ಅಧಿಕಾರಿ (CTO) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 40 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಕೆನರಾ ಬ್ಯಾಂಕ್‌ ನೇಮಕಾತಿ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಕೆನರಾ ಬ್ಯಾಂಕ್ ನಿಯಮಗಳ ಪ್ರಕಾರ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಕೆನರಾ ಬ್ಯಾಂಕ್‌ ನೇಮಕಾತಿ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಕೆನರಾ ಬ್ಯಾಂಕ್‌ ನೇಮಕಾತಿ ಪ್ರಕಾರ, ಅಭ್ಯರ್ಥಿಗಳನ್ನು ಸ್ಕ್ರೀನಿಂಗ್, ಶಾರ್ಟ್‌ಲಿಸ್ಟಿಂಗ್, ಸಂವಹನ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : SAI ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ರೂ 1 ಲಕ್ಷದವರೆಗೆ ವೇತನ

ಇದನ್ನೂ ಓದಿ : KSFC ನೇಮಕಾತಿ 2023 : ವಿವಿಧ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ 2023 : ತಾಂತ್ರಿಕ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಮಾರ್ಚ್ 2023

ಕೆನರಾ ಬ್ಯಾಂಕ್‌ ನೇಮಕಾತಿಗೆ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಆದ canarabank.com ನ್ನು ಬಳಸಿಕೊಳ್ಳಬಹುದಾಗಿದೆ. ಹಾಗೆಯೇ ಹುದ್ದೆಗಳಿಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳಿಗಾಗಿ, ಅಭ್ಯರ್ಥಿಗಳು ಟೋಲ್‌ ಫ್ರಿ ಸಂಖ್ಯೆ 080 2211 6922 ನಲ್ಲಿ ಸಂಪರ್ಕಿಸಬಹುದು.

Canara Bank Recruitment 2023 : Application Invitation for Various Officer Posts

Comments are closed.