ಕೆನರಾ ಬ್ಯಾಂಕ್ ನೇಮಕಾತಿ (Canara Bank Recruitment 2023) ಏಪ್ರಿಲ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಗುಂಪು ಮುಖ್ಯ ಅನುಸರಣೆ ಅಧಿಕಾರಿ ಅಥವಾ ಗ್ರೂಪ್ ಚೀಫ್ ಕಂಪ್ಲೈಯನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
Bank Recruitment 2023 : ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕೆನರಾ ಬ್ಯಾಂಕ್
ಹುದ್ದೆಗಳ ಸಂಖ್ಯೆ : 1 ಹುದ್ದೆ
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಗುಂಪು ಮುಖ್ಯ ಅನುಸರಣೆ ಅಧಿಕಾರಿ
ಶೈಕ್ಷಣಿಕ ಅರ್ಹತೆ :
ಕೆನರಾ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮೇ 1, 2023 ರಂತೆ ಕನಿಷ್ಠ 45 ವರ್ಷ ಮತ್ತು ಗರಿಷ್ಠ 55 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಕೆನರಾ ಬ್ಯಾಂಕ್ ನಿಯಮಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಾಗಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಟೆಸ್ಟ್, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : UPSC ನೇಮಕಾತಿ 2023 : ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ : NTPC ನೇಮಕಾತಿ 2023: ಮೆಕ್ಯಾನಿಕಲ್ ಎಂಜಿನಿಯರಿಂಗ್ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26 ಏಪ್ರಿಲ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಮೇ 2023
ಇದನ್ನೂ ಓದಿ : ಫೆಡರಲ್ ಬ್ಯಾಂಕ್ ನೇಮಕಾತಿ 2023 : ಸ್ನಾತಕೋತ್ತರ ಪದವೀಧರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
Canara Bank Recruitment 2023 : Job Opportunity for Graduates, Apply Now