ಪದವೀಧರರಿಗೆ ಕೆನರಾ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ

Canara Bank Recruitment 2025: ಬ್ಯಾಂಕ್‌ನಲ್ಲಿ ಉದ್ಯೋಗ ಗಳಿಸಬೇಕೆಂದು ಪ್ರಯತ್ನಪಡುತ್ತಿರುವ ಯುವಕರಿಗೆ ಶುಭ ಸುದ್ದಿ. ಕೆನರಾ ಬ್ಯಾಂಕ್‌ ಅಪ್ರೆಂಟಿಸ್‌ ಹುದ್ದೆಗಳಿಗೆ ಬಂಪರ್‌ ನೇಮಕಾತಿ ಘೋಷಿಸಿದೆ.

ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಸೆಪ್ಟೆಂಬರ್‌ 23 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಕ್ಟೋಬರ್‌ 12 ರೊಳಗೆ ಕೆನರಾ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಕೆನರಾ ಬ್ಯಾಂಕ್‌ ಒಟ್ಟು 3,500 ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ಅರ್ಹತೆ ಮತ್ತು ಮಾನದಂಡಗಳು

ಹುದ್ದೆಯ ಹೆಸರು

ಅಪ್ರೆಂಟಿಸ್‌ ಹುದ್ದೆಗಳು

ಒಟ್ಟು ಹುದ್ದೆಗಳು

ಈ ನೇಮಕಾತಿಯಲ್ಲಿ ಕೆನರಾ ಬ್ಯಾಂಕ್‌ ಒಟ್ಟು 3500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಮತ್ತು ಗರಿಷ್ಠ ವಯಸ್ಸು 28 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಸ್ಟೈಫಂಡ್‌

ಅಭ್ಯರ್ಥಿಗಳಿಗೆ ಮಾಸಿಕ 15,000 ರೂ. ಸ್ಟೈಫಂಡ್‌ ನೀಡಲಾಗುವುದು.

ಅರ್ಜಿ ಶುಲ್ಕ

SC/ST/PWBD ವರ್ಗದ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದಾಗಿದೆ.
ಇತರೆ ವಿಭಾಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ನೇಮಕಾತಿ ಅಧಿಸೂಚನೆ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಕೆ ಹೇಗೆ?

  1. ಮೊದಲನೆಯದಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ canarabank.bank.in ಗೆ ಭೇಟಿ ನೀಡಬೇಕು.
  2. ಇದರ ನಂತರ ನೀವು ಮುಖಪುಟದಲ್ಲಿ ನೀಡಲಾದ ವೃತ್ತಿ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  3. ಇದರ ನಂತರ ನೀವು ನೇಮಕಾತಿ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  4. ಈಗ ನೀವು ಹೊಸ ನೋಂದಣಿದಾರರಾಗಿದ್ದರೆ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
  5. ಇದರ ನಂತರ ನೀವು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
  6. ಬಳಿಕ ಅರ್ಜಿ ಶುಲ್ಕ ಪಾವತಿಸಿ, ಇನ್ನೊಮ್ಮೆ ಅರ್ಜಿ ನಮೂನೆಯನ್ನು ಸರಿಯಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸಬೇಕು.
  7. ಈಗ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಅದರ ಮುದ್ರಣವನ್ನು ತೆಗೆದುಕೊಳ್ಳಬೇಕು.

ಇದನ್ನೂ ಓದಿ: BSF ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೆ ದಿನ

(Canara Bank Recruitment 2025 apply for 3500 apprentice post before october 12)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories