ಕೆನರಾ ಕಾಲೇಜ್ ಸೊಸೈಟಿ ಕುಮಟಾ ನೇಮಕಾತಿ 2023 : ವಿವಿಧ ಸಹಾಯಕ ಪ್ರಾಧ್ಯಾಪಕ, ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆನರಾ ಕಾಲೇಜ್ ಸೊಸೈಟಿ ಕುಮಟಾದಲ್ಲಿ (Kanara College Society Kumta Recruitment 2023 ) ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ, ಗ್ರಂಥಪಾಲಕ ಹುದ್ದೆಗಳಿಗೆ ಭರ್ತಿಗಾಗಿ ಪ್ರಕಟನೆ ಹೊರಡಿಸಿದೆ. ಕೆನರಾ ಕಾಲೇಜ್ ಸೊಸೈಟಿ ಕುಮಟಾವು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸಹಾಯಕ ಪ್ರಾಧ್ಯಾಪಕ, ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

Kanara College Society Kumta Recruitment 2023 : ಕೆನರಾ ಕಾಲೇಜು ಸೊಸೈಟಿ ಕುಮಟಾ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :

ಸಂಸ್ಥೆಯ ಹೆಸರು : ಕೆನರಾ ಕಾಲೇಜು ಸೊಸೈಟಿ ಕುಮಟಾ
ಹುದ್ದೆಗಳ ಸಂಖ್ಯೆ : 07 ಹುದ್ದೆಗಳು
ಉದ್ಯೋಗ ಸ್ಥಳ : ಉತ್ತರ ಕನ್ನಡ
ಹುದ್ದೆಯ ಹೆಸರು : ಸಹಾಯಕ ಪ್ರಾಧ್ಯಾಪಕ, ಗ್ರಂಥಪಾಲಕ

ಕೆನರಾ ಕಾಲೇಜು ಸೊಸೈಟಿ ಕುಮಟಾ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರು : 1 ಹುದ್ದೆ
  • ಕನ್ನಡ ಸಹಾಯಕ ಪ್ರಾಧ್ಯಾಪಕರು : 2 ಹುದ್ದೆಗಳು
  • ರಸಾಯನಶಾಸ್ತ್ರದ ಸಹಾಯಕ ಪ್ರಾಧ್ಯಾಪಕರು : 1 ಹುದ್ದೆ
  • ವಾಣಿಜ್ಯಶಾಸ್ತ್ರದ ಸಹಾಯಕ ಪ್ರಾಧ್ಯಾಪಕರು : 1 ಹುದ್ದೆ
  • ದೈಹಿಕ ಶಿಕ್ಷಣ ಬೋಧಕರು : 1 ಹುದ್ದೆ
  • ಗ್ರಂಥಪಾಲಕ : 1 ಹುದ್ದೆ

ಶೈಕ್ಷಣಿಕ ಅರ್ಹತೆ:
ಕೆನರಾ ಕಾಲೇಜು ಸೊಸೈಟಿ ಕುಮಟಾ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿ, ನೆಟ್, ಎಸ್‌ಎಲ್‌ಇಟಿ ಪೂರ್ಣಗೊಳಿಸಿರಬೇಕು. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಶೇ. 55 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಇನ್ನುಳಿದಂತೆ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಕೆನರಾ ಕಾಲೇಜು ಸೊಸೈಟಿ ಕುಮಟಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳು : 05 ವರ್ಷಗಳು
ಒಬಿಸಿ ಅಭ್ಯರ್ಥಿಗಳು : 03 ವರ್ಷಗಳು

ಅರ್ಜಿ ಶುಲ್ಕ ವಿವರ :
ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳು : ರೂ.1000/-
ಎಲ್ಲಾ ಇತರ ಅಭ್ಯರ್ಥಿಗಳು : ರೂ.2000/-

ಪಾವತಿ ವಿಧಾನ:
ಕೆನರಾ ಕಾಲೇಜು ಸೊಸೈಟಿ ಕುಮಟಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗಾಗಿ ಅರ್ಜಿ ಅಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ :
ಕೆನರಾ ಕಾಲೇಜು ಸೊಸೈಟಿ ಕುಮಟಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗಾಗಿ ಅರ್ಜಿ ಅಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೆನರಾ ಕಾಲೇಜು ಸೊಸೈಟಿ ಕುಮಟಾ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಕೆನರಾ ಕಾಲೇಜು ಸೊಸೈಟಿ ಕುಮಟಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಯದರ್ಶಿ, ಕೆನರಾ ಕಾಲೇಜು ಸೊಸೈಟಿ (ಆರ್), ಕುಮಟಾ – 581362 (ಯು.ಕೆ) ಗೆ 01-ಮಾರ್ಚ್-2023 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08 ಫೆಬ್ರವರಿ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01 ಮಾರ್ಚ್ 2023

ಇದನ್ನೂ ಓದಿ : ಕರ್ನಾಟಕ ಹೈಕೋರ್ಟ್‌ ನೇಮಕಾತಿ 2023 : ಕ್ಲರ್ಕ್‌ ಹಾಗೂ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : SSLR Karnataka Recruitment 2023 : 2000 ಸರ್ವೇಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ : ವಿವಿಧ ಹುದ್ದೆಗಳ ನೇಮಕಾತಿ

ಗಮನಿಸಿ : ಅಭ್ಯರ್ಥಿಗಳು ತಮ್ಮ ಅರ್ಜಿಯ ಪ್ರತಿಯನ್ನು ನಿಗದಿತ ದಿನಾಂಕದೊಳಗೆ “ಪ್ರಾದೇಶಿಕ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಧಾರವಾಡ” ಅವರಿಗೆ ಸಲ್ಲಿಸಲು ಸೂಚಿಸಲಾಗಿದೆ.

Canara College Society Kumta Recruitment 2023 : Applications Invited for Various Assistant Professor, Librarian Posts

Comments are closed.