CBHFL ನೇಮಕಾತಿ 2023 : ವಿವಿಧ ಮ್ಯಾನೇಜರ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿ

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ (CBHFL Recruitment 2023) ನೇಮಕಾತಿಯ ಅಧಿಕೃತ ಅಧಿಸೂಚನೆ ಫೆಬ್ರವರಿ 2023ರ ಮೂಲಕ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ (CBHFL)
ಹುದ್ದೆಗಳ ಸಂಖ್ಯೆ : 8 ಹುದ್ದೆಗಳು
ಉದ್ಯೋಗ ಸ್ಥಳ : ಛತ್ತೀಸ್‌ಗಢ, ಹರಿಯಾಣ, ಕರ್ನಾಟಕ ಹಾಗೂ ಮಧ್ಯಪ್ರದೇಶ
ಹುದ್ದೆಯ ಹೆಸರು : ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್
ವೇತನ : ರೂ.600000-1800000/- ವರ್ಷಕ್ಕೆ

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಮ್ಯಾನೇಜರ್ : 4 ಹುದ್ದೆಗಳು
ಸಹಾಯಕ ವ್ಯವಸ್ಥಾಪಕ : 3 ಹುದ್ದೆಗಳು
ಮುಖ್ಯ ಅಪಾಯ ಅಧಿಕಾರಿ : 1 ಹುದ್ದೆ

ವಿದ್ಯಾರ್ಹತೆ ವಿವರ :
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಡಿಪ್ಲೊಮಾ, ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :

  • ಮ್ಯಾನೇಜರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
  • ಸಹಾಯಕ ವ್ಯವಸ್ಥಾಪಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
  • ಮುಖ್ಯ ಅಪಾಯ ಅಧಿಕಾರಿ ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳು : 05 ವರ್ಷಗಳು
OBC ಅಭ್ಯರ್ಥಿಗಳು : 03 ವರ್ಷಗಳು

ಅರ್ಜಿ ಶುಲ್ಕ :
SC/ST/OBC ಅಭ್ಯರ್ಥಿಗಳು : ರೂ.300/-
ಸಾಮಾನ್ಯ/PWD/EWS ಅಭ್ಯರ್ಥಿಗಳು : ರೂ.1000/-

ಪಾವತಿ ವಿಧಾನ :
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ವರ್ಷಕ್ಕೆ)ದ ವಿವರ :
ಮ್ಯಾನೇಜರ್ : ರೂ.750000/-
ಸಹಾಯಕ ವ್ಯವಸ್ಥಾಪಕರು : ರೂ.600000/-
ಮುಖ್ಯ ಅಪಾಯ ಅಧಿಕಾರಿ : ರೂ.1500000-1800000/-

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್‌ ನೇಮಕಾತಿ (ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್) ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ :
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ HR, ಕಾರ್ಪೊರೇಟ್ ಆಫೀಸ್, ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬಿಲ್ಡಿಂಗ್, MMO, 6 ನೇ ಮಹಡಿ, MG ರಸ್ತೆ, ಫೋರ್ಟ್, ಹುಟಾಟಮಾ ಚೌಕ್, ಮುಂಬೈ-400023 ಗೆ ಮಾರ್ಚ್ 15, 2023 ರಂದು ಅಥವಾ ಮೊದಲು ಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : ಬಿಬಿಎಂಪಿ ನೇಮಕಾತಿ 2023 : ವಿವಿಧ ವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಬ್ಯಾಂಕ್‌ ಆಫ್‌ ಬರೋಡಾ ನೇಮಕಾತಿ 2023 : ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : KSDA Recruitment 2023 : ಕರ್ನಾಟಕ ರಾಜ್ಯ ಕೃಷಿ ಇಲಾಖೆ ನೇಮಕಾತಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಫೆಬ್ರವರಿ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಮಾರ್ಚ್ 2023

CBHFL Recruitment 2023 : Apply for Various Manager Posts

Comments are closed.