Central Railway Recruitment 2022:10ನೇ ತರಗತಿ, ಪಿಯುಸಿ ಓದಿದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ

(Central Railway Recruitment 2022)ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 596 ಸ್ಟೆನೋಗ್ರಾಫರ್, ಸೀನಿಯರ್ ಕಮರ್ಷಿಯಲ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್, ಗೂಡ್ಸ್ ಗಾರ್ಡ್, ಸ್ಟೇಷನ್ ಮಾಸ್ಟರ್, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್, ಜೂನಿಯರ್ ಕಾಮ್ಲ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ ಮತ್ತು ಅಕೌಂಟ್ಸ್ ಕ್ಲರ್ಕ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28 ನವೆಂಬರ್ 2022 ಮೊದಲು ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

Central Railway Recruitment 2022 : ಖಾಲಿರುವ ಹುದ್ದೆಗಳ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು:ಕೇಂದ್ರರೈಲ್ವೆ
ಹುದ್ದೆಗಳ ಸಂಖ್ಯೆ 596 ಪೋಸ್ಟ್‌ಗಳು
ಉದ್ಯೋಗ ಸ್ಥಳ:ಭಾರತದಾದ್ಯಂತ
ವೇತನ ಮಾಹಿತಿ:
ಕನಿಷ್ಠ ವೇತನ – ರೂ.21,700/-
ಗರಿಷ್ಠ ಸಂಬಳ – ರೂ. 81,000/-

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ಸಂಖ್ಯೆಯ ಸಂಪೂರ್ಣ ವಿವರ:
ಸ್ಟೆನೋಗ್ರಾಫರ್ -8
ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ -154
ಗೂಡ್ಸ್ ಗಾರ್ಡ್ -46
ಸ್ಟೇಷನ್ ಮಾಸ್ಟರ್- 75
ಜೂನಿಯರ್ ಖಾತೆ ಸಹಾಯಕ- 150
ಜೂನಿಯರ್ ಕಮ್ಲ್ ಕ್ಲರ್ಕ್ ಕಮ್ ಟಿಕೆಟ್ ಕ್ಲರ್ಕ್ -126
ಅಕೌಂಟ್ಸ್ ಕ್ಲರ್ಕ್ -37

ವಿದ್ಯಾರ್ಹತೆ ವಿವರ:
ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯಗಳಿಂದ ಹತ್ತನೆ ತರಗತಿ ಮತ್ತು ದ್ವಿತೀಯ ಪಿಯುಸಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
UR: 42 ವರ್ಷಗಳು
OBC: 45 ವರ್ಷಗಳು
SC/ST: 47 ವರ್ಷಗಳು

ಆಯ್ಕೆ ಪ್ರಕ್ರಿಯೆ:
ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ಕೌಶಲ್ಯ ಪರೀಕ್ಷೆ ,ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:SAIL Recruitment 2022 : 261 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:DRDO CEPTAM Recruitment 2022 – 1061 ಸ್ಟೆನೋಗ್ರಾಫರ್ ಗ್ರೇಡ್, ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ)28-10-2022 ರಿಂದ 28 – 11-2022 ರವರೆಗೆ ಕೇಂದ್ರ ರೈಲ್ವೆ ಇಲಾಖೆಯ ವೆಬ್ ಸೈಟ್‌ ಆದ rrccr.com ನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: 28 ಅಕ್ಟೋಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :28 ನವೆಂಬರ್ 2022

10th Class, PUC Graduates Job Opportunities in Railways

Comments are closed.