ಚಾರ್ಟರ್ಡ್ ಸಹಕಾರಿ ಬ್ಯಾಂಕ್ ನೇಮಕಾತಿ 2026: ಜೂನಿಯರ್ ಅಸಿಸ್ಟೆಂಟ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Chartered Co-op Bank Recruitment 2026: ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಚಾರ್ಟರ್ಡ್ ಸಹಕಾರಿ ಬ್ಯಾಂಕ್ (Chartered Co-operative Bank) ವಿವಿಧ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
- ಒಟ್ಟು ಹುದ್ದೆಗಳು: 9
- ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ (Jr. Assistant) ಮತ್ತು ಡ್ರೈವರ್ (Driver).
- ಕೆಲಸದ ಸ್ಥಳ: ಬೆಂಗಳೂರು.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 18, 2026.
ಅರ್ಹತಾ ಮಾನದಂಡಗಳು:
ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ಪದವಿ, ಬಿ.ಕಾಂ, ಎಂ.ಕಾಂ ಅಥವಾ ಎಂಬಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷಗಳ ಒಳಗಿರಬೇಕು (ಸರ್ಕಾರಿ ನಿಯಮದಂತೆ ಸಡಿಲಿಕೆ ಇರಲಿದೆ).
ಅರ್ಜಿ ಸಲ್ಲಿಸುವ ವಿಧಾನ:
ಈ ನೇಮಕಾತಿಯು ಆಫ್ಲೈನ್ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಬೇಕು:
- ಅಧಿಕೃತ ವೆಬ್ಸೈಟ್ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು (ಅಂಕಪಟ್ಟಿ, ಐಡಿ ಪ್ರೂಫ್, ಫೋಟೋ ಇತ್ಯಾದಿ) ಲಗತ್ತಿಸಿ.
- ಭರ್ತಿ ಮಾಡಿದ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿ:
ವಿಳಾಸ: ಚಾರ್ಟರ್ಡ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್, ನಂ–1, 1ನೇ ಮುಖ್ಯ ರಸ್ತೆ, 1ನೇ ಬ್ಲಾಕ್, ಕೋರಮಂಗಲ, ಬೆಂಗಳೂರು – 560034.
ವಾಹನ ಸವಾರರಿಗೆ ಬಿಗ್ ರಿಲೀಫ್: ಫಾಸ್ಟ್ಟ್ಯಾಗ್ KYC ನವೀಕರಣ ನಿಯಮಾವಳಿಗಳಲ್ಲಿ ಬದಲಾವಣೆ
ಪ್ರಮುಖ ಸೂಚನೆ:
ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ತಾವು ಅರ್ಹತೆ ಹೊಂದಿದ್ದೇವೆಯೇ ಎಂದು ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.



