ಪದವಿ, ಸ್ನಾತಕೋತ್ತರ ಪದವೀಧರರಿಗೆ ಸಿಟಿ ಯೂನಿಯನ್ ಬ್ಯಾಂಕ್ ಉದ್ಯೋಗಾವಕಾಶ

ಸಿಟಿ ಯೂನಿಯನ್ ಬ್ಯಾಂಕ್ (City Union Bank Recruitment 2023) ಸಹಾಯಕ ಮ್ಯಾನೇಜರ್, ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಸಿಟಿ ಯೂನಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಸಿಟಿ ಯೂನಿಯನ್ ಬ್ಯಾಂಕ್
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಹಾಗೂ ಕರ್ನಾಟಕ
ಹುದ್ದೆಯ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್, ರಿಲೇಶನ್ ಶಿಪ್ ಮ್ಯಾನೇಜರ್
ಸಂಬಳ: ಸಿಟಿ ಯೂನಿಯನ್ ಬ್ಯಾಂಕ್ ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ಸಿಟಿ ಯೂನಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಸಿಟಿ ಯೂನಿಯನ್ ಬ್ಯಾಂಕ್‌ಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :

  • ಸಹಾಯಕ ವ್ಯವಸ್ಥಾಪಕರು/ಶಾಖೆ ಅಭಿವೃದ್ಧಿ ವ್ಯವಸ್ಥಾಪಕರು : ಈ ಹುದ್ದೆಗಾಗಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
  • ಸಂಬಂಧ ನಿರ್ವಾಹಕ-I/II : ಈ ಹುದ್ದೆಗಾಗಿ ಅಭ್ಯರ್ಥಿಗಳಿಗೆ ಕನಿಷ್ಠ 22 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 27 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಸಿಟಿ ಯೂನಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಸಿಟಿ ಯೂನಿಯನ್ ಬ್ಯಾಂಕ್ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಿಟಿ ಯೂನಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಯಾವುದೇ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಸಿಟಿ ಯೂನಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಭಾರತೀಯ ನೌಕಾಪಡೆಯ ನೇಮಕಾತಿ 2023 : ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : Mysore District Court Recruitment 2023 : 10 ನೇ ತರಗತಿ ಪಿಯುಸಿ, ಡಿಪ್ಲೊಮಾ ಪಾಸಾದವರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಮೇ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07 ಮೇ 2023

City Union Bank Recruitment 2023 : City Union Bank Job Opportunity for Graduates, Post Graduates

Comments are closed.