ಭಾನುವಾರ, ಏಪ್ರಿಲ್ 27, 2025
Homejob NewsCochin Shipyard Recruitment 2023 : ಮಲ್ಪೆ ಶಿಪ್ ಯಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ...

Cochin Shipyard Recruitment 2023 : ಮಲ್ಪೆ ಶಿಪ್ ಯಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

- Advertisement -

(Cochin Shipyard Recruitment 2023) ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌ ಮಲ್ಪೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌ ಅಧಿಕೃತ ಅಧಿಸೂಚನೆಯ ಸಂಪೂರ್ಣ ವಿವರ ;
ಸಂಸ್ಥೆ : ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌
ಹುದ್ದೆ : ಡೆಪ್ಯುಟಿ ಮ್ಯಾನೇಜರ್‌, ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌
ಒಟ್ಟು ಖಾಲಿ ಇರುವ ಹುದ್ದೆಗಳು : 3
ವಿದ್ಯಾರ್ಹತೆ : ಇಂಜಿನಿಯರಿಂಗ್‌
ಉದ್ಯೋಗದ ಸ್ಥಳ : ಮಲ್ಪೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 3, 2023

ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ;
ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌ : 1 ಹುದ್ದೆ
ಡೆಪ್ಯೂಟಿ ಮ್ಯಾನೇಜರ್‌ : 2 ಹುದ್ದೆ

ಶೈಕ್ಷಣಿಕ ಅರ್ಹತೆ :
ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌ ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಹ ಅಭ್ಯರ್ಥಿಗಳು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಮೆಕ್ಯಾನಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್‌ನಲ್ಲಿ ಪದವಿ, ಎಂಜಿನಿಯರಿಂಗ್/ನೇವಲ್ ಆರ್ಕಿಟೆಕ್ಚರ್/ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ, ಡೆಪ್ಯುಟಿ ಮ್ಯಾನೇಜರ್-ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಪಡೆದಿರಬೇಕು.

ವಯೋಮಿತಿ :
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- ಗರಿಷ್ಠ 48 ವರ್ಷ
ಡೆಪ್ಯುಟಿ ಮ್ಯಾನೇಜರ್- ಗರಿಷ್ಠ 38 ವರ್ಷ

ಆಯ್ಕೆ ಪ್ರಕ್ರಿಯೆ :
ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌ ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಹ ಅಭ್ಯರ್ಥಿಗಳನ್ನು ಅವರ ಕೆಲಸದ ಅನುಭವ, ಪವರ್‌ ಪಾಯಿಂಟ್‌ ಪ್ರೆಸೆಂಟೇಶನ್‌, ಲಿಖಿತ ಪರೀಕ್ಷೆ ಹಾಗೂ ಸಂದರ್ಶನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ :
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್-ಮಾಸಿಕ ವೇತನ 80,000-2,20,000 ರೂ.
ಡೆಪ್ಯುಟಿ ಮ್ಯಾನೇಜರ್- ಮಾಸಿಕ ವೇತನ 50,000-1,60,000 ರೂ.

ಅರ್ಜಿ ಸಲ್ಲಿಸುವುದು ಹೇಗೆ ?
ಮೊದಲಿಗೆ ಅಭ್ಯರ್ಥಿಗಳು ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌ ಸಂಸ್ಥೆಯಿಂದ ನೀಡಲಾಗುವ ಅರ್ಜಿಯನ್ನು ಭರ್ತಿ ಮಾಡಬೇಕಾಗುತ್ತದೆ. ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾದ ಇ-ಮೇಲ್‌ ಐಡಿಗೆ ಕಳುಹಿಸಬೇಕು.
ಇ-ಮೇಲ್‌ ಐಡಿ : hr@udupicsl.com

ಇದನ್ನೂ ಓದಿ : ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ 2023 : ಸಾಮಾನ್ಯ ಪ್ರವೇಶ ಪರೀಕ್ಷೆ ಆರಂಭ

ಪ್ರಮುಖ ದಿನಾಂಕ:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 12/04/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮೇ 3, 2023

Cochin Shipyard Recruitment 2023: Applications invited for various posts in Malpe Shipyard

RELATED ARTICLES

Most Popular