ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (CSG Karnataka Recruitment 2023) ಕರ್ನಾಟಕ ಅಧಿಕೃತ ಅಧಿಸೂಚನೆ ಫೆಬ್ರವರಿ 2023 ಮೂಲಕ ಸಾಫ್ಟ್‌ವೇರ್ ಇಂಜಿನಿಯರ್, ಬಿಸಿನೆಸ್ ವಿಶ್ಲೇಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (CSG) ಕರ್ನಾಟಕ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (CSG Karnataka)
ಹುದ್ದೆಗಳ ಸಂಖ್ಯೆ : 44 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಸಾಫ್ಟ್‌ವೇರ್ ಇಂಜಿನಿಯರ್, ವ್ಯಾಪಾರ ವಿಶ್ಲೇಷಕ
CSG ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
- ತಾಂತ್ರಿಕ ಪ್ರಾಜೆಕ್ಟ್ ಮ್ಯಾನೇಜರ್ : 5 ಹುದ್ದೆಗಳು
- ಪ್ರಾಜೆಕ್ಟ್ ಲೀಡ್ : 7 ಹುದ್ದೆಗಳು
- ವ್ಯಾಪಾರ ವಿಶ್ಲೇಷಕ : 7 ಹುದ್ದೆಗಳು
- ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ : 3 ಹುದ್ದೆಗಳು
- ಸಾಫ್ಟ್‌ವೇರ್ ಇಂಜಿನಿಯರ್ : 10 ಹುದ್ದೆಗಳು
- ಡೇಟಾಬೇಸ್ ಡಿಸೈನರ್ : 2 ಹುದ್ದೆಗಳು
- ಡೇಟಾಬೇಸ್ ನಿರ್ವಾಹಕರು : 3 ಹುದ್ದೆಗಳು
- ಸಿಸ್ಟಮ್ ಅಡ್ಮಿನಿಸ್ಟ್ರೇಟರ್ : 3 ಹುದ್ದೆಗಳು
- ಸಲಹೆಗಾರ : 3 ಹುದ್ದೆಗಳು
- ಸಹಾಯಕ ವ್ಯವಸ್ಥಾಪಕ : 1 ಹುದ್ದೆ
CSG ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :
- ತಾಂತ್ರಿಕ ಪ್ರಾಜೆಕ್ಟ್ ಮ್ಯಾನೇಜರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E ಅಥವಾ B.Tech, MCA ಪದವಿಯನ್ನು ಪೂರ್ಣಗೊಳಿಸಿರಬೇಕು.
- ಪ್ರಾಜೆಕ್ಟ್ ಲೀಡ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E ಅಥವಾ B.Tech in CSE/IT, MCA, M.Sc ಪದವಿಯನ್ನು ಪೂರ್ಣಗೊಳಿಸಿರಬೇಕು.
- ವ್ಯಾಪಾರ ವಿಶ್ಲೇಷಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CSE/IT, MCA, M.Sc, MBA ನಲ್ಲಿ B.E ಅಥವಾ B.Tech ಪದವಿಯನ್ನು ಪೂರ್ಣಗೊಳಿಸಿರಬೇಕು.
- ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CSE/ IT, MCA, M.Sc ನಲ್ಲಿ B.E ಅಥವಾ B.Tech ಪದವಿಯನ್ನು ಪೂರ್ಣಗೊಳಿಸಿರಬೇಕು.
- ಸಾಫ್ಟ್ವೇರ್ ಇಂಜಿನಿಯರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CSE/ IT, MCA, M.Sc ನಲ್ಲಿ B.E ಅಥವಾ B.Tech ಪದವಿಯನ್ನು ಪೂರ್ಣಗೊಳಿಸಿರಬೇಕು.
- ಡೇಟಾಬೇಸ್ ಡಿಸೈನರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CSE/ IT, MCA, M.Sc ನಲ್ಲಿ B.E ಅಥವಾ B.Tech ಪದವಿಯನ್ನು ಪೂರ್ಣಗೊಳಿಸಿರಬೇಕು.
- ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E ಅಥವಾ B.Tech, MCA, M.Sc ಪದವಿಯನ್ನು ಪೂರ್ಣಗೊಳಿಸಿರಬೇಕು.
- ಸಿಸ್ಟಮ್ ಅಡ್ಮಿನಿಸ್ಟ್ರೇಟರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CSE/IT, MCA, M.Sc, MBA ನಲ್ಲಿ ಸಲಹೆಗಾರ B.E ಅಥವಾ B.Tech ಪದವಿಯನ್ನು ಪೂರ್ಣಗೊಳಿಸಿರಬೇಕು.
- ಸಹಾಯಕ ವ್ಯವಸ್ಥಾಪಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ವಿಶ್ವವಿದ್ಯಾಲಯಗಳಿಂದ ಎಂಬಿಎ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿ :
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು CSG ಕರ್ನಾಟಕ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : ಶಾಲಾ ಶಿಕ್ಷಕರ ನೇಮಕಾತಿ : ಇನ್ನೊಂದು ವಾರದಲ್ಲಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಇದನ್ನೂ ಓದಿ : DC Office Belagavi Recruitment 2023 : ವಿವಿಧ ಪುರಸಭೆ, ಪಟ್ಟಣ ಪಂಚಾಯತ್ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : ಹಟ್ಟಿ ಚಿನ್ನದ ಗಣಿ ಕಂಪನಿ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19 ಮಾರ್ಚ್ 2023
CSG Karnataka Recruitment 2023 : Application Invitation for Various Posts