ಡಿಸಿಸಿ ಬ್ಯಾಂಕ್ ನೇಮಕಾತಿ 2023 : ವಿವಿಧ ಅಕೌಂಟೆಂಟ್, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ


ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ (Kolar Chikkaballapur DCC Bank Recruitment 2023) ನೇಮಕಾತಿಯ ಅಧಿಕೃತ ಅಧಿಸೂಚನೆ ಮಾರ್ಚ್ 2023 ರ ಮೂಲಕ ಅಕೌಂಟೆಂಟ್, ಅಸಿಸ್ಟೆಂಟ್ ಮ್ಯಾನೇಜರ್, ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 36 ಹುದ್ದೆಗಳು
ಉದ್ಯೋಗ ಸ್ಥಳ : ಕೋಲಾರ ಹಾಗೂ ಚಿಕ್ಕಬಳ್ಳಾಪುರ
ಹುದ್ದೆಯ ಹೆಸರು : ಅಕೌಂಟೆಂಟ್, ಅಸಿಸ್ಟೆಂಟ್ ಮ್ಯಾನೇಜರ್, ಡ್ರೈವರ್
ಸಂಬಳ : ರೂ.27650-52650/ಪ್ರತಿ ತಿಂಗಳಿಗೆ

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ಅಕೌಂಟೆಂಟ್ : 9 ಹುದ್ದೆಗಳು
ಸಹಾಯಕ ವ್ಯವಸ್ಥಾಪಕ : 1೪ ಹುದ್ದೆಗಳು
ಚಾಲಕ : 3 ಹುದ್ದೆಗಳು
ಜವಾನರು : 10 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾರ್ಚ್‌ 16, 2023 ರಂತೆ ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಒಬಿಸಿ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು : 03 ವರ್ಷಗಳು
ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳು : 05 ವರ್ಷಗಳು

ಅರ್ಜಿ ಶುಲ್ಕ :
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು : ರೂ.1000/-
ಎಸ್‌ಸಿ/ಎಸ್‌ಟಿ/ಪ್ರವರ್ಗ-I /ಪಿಹೆಚ್/ಮಾಜಿ ಸೈನಿಕ/ವಿಧವೆ ಅಭ್ಯರ್ಥಿಗಳು‌ : ರೂ.500/-

ಪಾವತಿ ವಿಧಾನ:
ಕೋಲಾರ ಚಿಕ್ಕಬಳ್ಳಾ
ಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಹುದ್ದೆವಾರು ವೇತನ (ತಿಂಗಳಿಗೆ) ವಿವರ :
ಲೆಕ್ಕಾಧಿಕಾರಿ : ರೂ.36000-67550/-
ಸಹಾಯಕ ವ್ಯವಸ್ಥಾಪಕರು : ರೂ.33450-62600/-
ಚಾಲಕ : ರೂ.27650-52650/-
ಜವಾನರು : ರೂ.23500-47650/-

ಇದನ್ನೂ ಓದಿ : SBI ನೇಮಕಾತಿ 2023 : ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಉಡುಪಿ ಜಿಲ್ಲಾಧಿಕಾರಿ ಕಚೇರಿ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : KMF recruitment 2023: ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16 ಮಾರ್ಚ್ 2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 16 ಮಾರ್ಚ್ 2023

DCC Bank Recruitment 2023 : Apply for Various Accountant, Assistant Manager Posts

Comments are closed.