ಪದವೀಧರರಿಗೆ ಅರಣ್ಯ ಇಲಾಖೆಯಲ್ಲಿದೆ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

0

ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆಯು ಪದವೀಧರರಿಗೆ ಸಿಹಿಸುದ್ದಿಯನ್ನು ನೀಡಿದೆ. ಕರ್ನಾಟಕ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ ಎ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಲೋಕಸೇವಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಗ್ರೂಫ್ ಎ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಿ.ಎಸ್ಸಿ (ಅರಣ್ಯ ಶಾಸ್ತ್ರ) ಪದವೀಧರರಿಗೆ 8, ಬಿ.ಎಸ್ಸಿ (ಅರಣ್ಯ ಶಾಸ್ತ್ರ) ಪದವಿ ಹೊರತುಪಡಿಸಿ ಇತರೆ ವಿಜ್ಞಾನ /ಇಂಜಿನಿಯರಿಂಗ್ ಪದವೀಧರರಿಗೆ 8 ಹುದ್ದೆಗಳನ್ನು ಮೀಸಲಿಡಲಾಗಿದೆ.

ಅಭ್ಯರ್ಥಿಗಳು ಅಕ್ಟೋಬರ್ 20ರಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನವೆಂಬರ್ 20 ಕೊನೆಯ ದಿನವಾಗಿದೆ. ಇನ್ನು ಅರ್ಜಿ ಸಲ್ಲಿಸಿದ ಅಭರ್ಥಿಗಳು ನವೆಂಬರ್ 21ರ ಒಳಗಾಗಿ ಶುಲ್ಕವನ್ನು ಪಾವತಿಸಬೇಕಾಗಿದೆ.

ಪರೀಕ್ಷಾ ಶುಲ್ಕ :
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600 ರೂ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ.

Leave A Reply

Your email address will not be published.